ರಾಜ್ಯದಲ್ಲಿ ವಾಣಿಜ್ಯ LPG ಸಿಲಿಂಡರ್ಗಳ ಕೊರತೆ ತೀವ್ರಗೊಂಡಿದ್ದು, ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತವಾಗಿದೆ. ಕೆ. ಎಚ್. ಮುನಿಯಪ್ಪ ಈ ಕುರಿತು ಮಾತನಾಡಿ, ಹೋಟೆಲ್ ಮಾಲೀಕರು ಇನ್ನೂ ಒಂದು ವಾರ ಸಹನೆ ತಾಳಬೇಕು ಎಂದು ಮತ್ತೊಮ್ಮೆ ಮನವಿ ಮಾಡಿದ್ದಾರೆ.
ಸದನದಲ್ಲಿ ಮಾಹಿತಿ ನೀಡಿದ ಸಚಿವರು, ಪ್ರಸ್ತುತ ಪರಿಸ್ಥಿತಿಯಲ್ಲಿ ಹೋಟೆಲ್ಗಳಿಗೆ ಮಾತ್ರ 1,000 ಸಿಲಿಂಡರ್ಗಳನ್ನು ಪೂರೈಸಲು ಅವಕಾಶವಿದೆ ಎಂದು ಹೇಳಿದ್ದಾರೆ. ಯಾರಿಗೆ ನೀಡಬೇಕು ಎಂಬುದೇ ಗೊಂದಲವಾಗಿದೆ ಎಂದು ಅವರು ತಿಳಿಸಿದ್ದಾರೆ.
ಇದೇ ವೇಳೆ ಇರಾನ್ ಜೊತೆ ಕೇಂದ್ರ ಸರ್ಕಾರ ಚರ್ಚೆ ನಡೆಸುತ್ತಿದ್ದು, ಸಮಸ್ಯೆ ಪರಿಹರಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಹೇಳಿದ್ದಾರೆ. ಈಗಾಗಲೇ 16 ಹಡಗುಗಳು ಸರತಿಯಲ್ಲಿ ಕಾಯುತ್ತಿದ್ದು, ಅವು ಬಂದ ಬಳಿಕ ಗ್ಯಾಸ್ ಕೊರತೆ ಸಮಸ್ಯೆ ನಿವಾರಣೆಯಾಗುವ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.
ಈ ಪರಿಸ್ಥಿತಿಯಿಂದ ಹೋಟೆಲ್ ಉದ್ಯಮದ ಮೇಲೆ ಭಾರೀ ಪರಿಣಾಮ ಬೀರಿದ್ದು, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸುಧಾರಣೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.







