ADVERTISEMENT
Friday, August 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕಾಂಗ್ರೆಸ್ ಪದಾಧಿಕಾರಿಗಳ ಬದಲಾವಣೆ, ಪಕ್ಷದ ಕೆಲಸ ಮಾಡಿದವರಿಗೆ ಟಿಕೆಟ್; ಡಿಕೆಶಿ ಖಡಕ್ ಮೆಸೇಜ್

Kariyappa N by Kariyappa N
January 11, 2021
in Newsbeat, Politics, Samagra karnataka, ರಾಜ್ಯ
congress
Share on FacebookShare on TwitterShare on WhatsappShare on Telegram

ಹುಬ್ಬಳ್ಳಿ: ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳಲ್ಲಿ ಕೆಲವು ಬದಲಾವಣೆ ಮಾಡಲಾಗುವುದು. ಪಕ್ಷ ಸಂಘಟನೆಯಲ್ಲಿ ಉತ್ತಮ ಕೆಲಸ ಮಾಡಿದವರಿಗೆ ಅಸೆಂಬ್ಲಿ, ತಾಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆಗಳಿಗೆ ಟಿಕೆಟ್ ನೀಡಲಾಗುವುದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

meeting
ಹುಬ್ಬಳ್ಳಿಯಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಅನೇಕ ವರ್ಷಗಳಿಂದ ಉತ್ತಮ ಕೆಲಸ ಮಾಡಿರುವವರಿಗೆ ಬಡ್ತಿ ನೀಡಿ ಹೊಸಬರಿಗೆ ಅವಕಾಶ ಕಲ್ಪಿಸಲಾಗುವುದು. ಜಿಲ್ಲಾ ಪಂಚಾಯ್ತಿ, ತಾಲೂಕು ಪಂಚಾಯ್ತಿ, ಪಾಲಿಕೆಗಳಿಗೆ ಟಿಕೆಟ್ ನೀಡಲು ಸಮಿತಿ ರಚಿಸಲಾಗುವುದು. ಈ ಬಗ್ಗೆಯೂ ಎಐಸಿಸಿಯಿಂದ ಸೂಚನೆ ಬಂದಿದೆ. ಸಮಿತಿ ನೀಡಿರುವ ಮಾನದಂಡಗಳ ಆಧಾರದ ಮೇಲೆ ಟಿಕೆಟ್ ನೀಡಲಾಗುವುದು ಎಂದರು.

Related posts

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

August 21, 2026
jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

August 21, 2026

ಎಲೆಕ್ಷನ್ ಟೈಮಲ್ಲಿ ಟಿಕೆಟ್ ಕೇಳಿದ್ರೆ ಕೊಡಲ್ಲ
ವಿಧಾನಸಭೆ ಚುನಾವಣೆ ಸೇರಿದಂತೆ ಪಕ್ಷ ಚಿನ್ಹೆಯಡಿಯ ನಡೆಯುವ ಚುನಾವಣೆಗಳ ಸಂದರ್ಭದಲ್ಲಿ ಬಂದು ಹಲವರು ಕಾಂಗ್ರೆಸ್ ಟಿಕೆಟ್ ಕೇಳುವುದು ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಇನ್ನು ಮುಂದೆ ಕೊನೆ ಕ್ಷಣದಲ್ಲಿ ಬಂದು ಟಿಕೆಟ್ ಕೇಳಿದರೆ ಕೊಡಲ್ಲ. ಜನರ ಮಧ್ಯೆ ನಿಂತು ಹೋರಾಟ, ಪಕ್ಷ ಸಂಘಟನೆ ಮಾಡಿದವರಿಗೆ ಟಿಕೆಟ್ ನೀಡಲಾಗವುದು.
ನಾಯಕರು ಸಂಘಟನೆ ಮಾಡಲು ವಿಫಲರಾಗಿದ್ದರೆ ಬದಲಾವಣೆ ಮಾಡುತ್ತೇವೆ. ಈ ವರ್ಷ ಕಾಂಗ್ರೆಸ್ ಪಾಲಿಗೆ ಹೋರಾಟದ ವರ್ಷ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಎಷ್ಟೇ ದೊಡ್ಡ ನಾಯಕರಾದರೂ ನಾವು ಕೂಡ ಕಾರ್ಯಕರ್ತರೆ. ಇನ್ನು ಮುಂದೆ ವೇದಿಕೆ ಸಂಸ್ಕೃತಿ ಇರುವುದಿಲ್ಲ. ಮುಂದಿನ ಎಲ್ಲ ಕಾರ್ಯಕ್ರಮಗಳು ಇದೇ ಮಾದರಿಯಲ್ಲಿ ನಡೆಯಬೇಕು. ಯುದ್ಧ ಬಂದಾಗ ಶಾಸ್ತ್ರಾಭ್ಯಾಸ ಮಾಡುವುದಲ್ಲ. ಈಗಿನಿಂದಲೇ ನಾವು ನಮ್ಮ ತಯಾರಿ ಮಾಡಿಕೊಳ್ಳಬೇಕು. ಜನರ ಸಮಸ್ಯೆ, ಅಭಿಪ್ರಾಯ ಸಂಗ್ರಹಿಸಿ, ಅದಕ್ಕೆ ತಕ್ಕಂತೆ ಕಾರ್ಯಕ್ರಮ ರೂಪಿಸಬೇಕು ಎಂದು ಸೂಚನೆ ನೀಡಿದರು.

ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಸಂಕಲ್ಪ
ರಾಜ್ಯದಲ್ಲಿನ ಹಾಗೂ ರಾಷ್ಟ್ರದಲ್ಲಿನ ರಾಜಕಾರಣವನ್ನು ನಾವು ಗಮನಿಸುತ್ತಿದ್ದೇವೆ. ನಮ್ಮ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು ಎಂಬ ಸಂಕಲ್ಪವನ್ನು ನಾವು ಮಾಡಿದ್ದೇವೆ. ಮಾಸ್ ಬೇಸ್ ಪಕ್ಷವನ್ನು ಕೇಡರ್ ಬೇಸ್ ಪಕ್ಷವಾಗಿ ಮಾಡಬೇಕು. ಎಐಸಿಸಿಯಿಂದ ನಮಗೆ ಸೂಚನೆ ಬಂದಿದ್ದು, ನಾವು ಹಿರಿಯ ನಾಯಕರು ಪಕ್ಷವನ್ನು ಹೇಗೆ ಮುನ್ನಡೆಸಬೇಕು ಎಂಬುದರ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದು ಡಿಕೆಶಿ ತಿಳಿಸಿದ್ದಾರೆ.
ಸಂಘಟನೆಗೆ ಒತ್ತು ನೀಡಬೇಕು. ಯಾರು ಎಷ್ಟೇ ದೊಡ್ಡ ನಾಯಕರಾದರೂ ಅವರು ತಮ್ಮ ಬೂತ್ ಜವಾಬ್ದಾರಿ ವಹಿಸಿಕೊಳ್ಳಬೇಕು. ತಮ್ಮ ಪಂಚಾಯ್ತಿ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂಬ ತೀರ್ಮಾನ ಆಗಿದೆ.
ನಾವು ಸಂಘಟನೆ ಜತೆಗೆ ಹೋರಾಟವನ್ನು ನಡೆಸಬೇಕಿದೆ. ಕೇವಲ ಒಂದು ಕಡೆ ಸೇರಿ ಭಾಷಣ ಮಾಡಿದರೆ ಸಾಲುವುದಿಲ್ಲ. ಕಾಂಗ್ರೆಸ್ ಪಕ್ಷದ ಇತಿಹಾಸವೇ ಹೋರಾಟ. ಈ ದೇಶದ ಐಕ್ಯತೆ, ಸಮಗ್ರತೆ ಕಾಪಾಡಿ ಭಾರತವನ್ನು ಅಭಿವೃದ್ಧಿಶೀಲ ರಾಷ್ಟ್ರವನ್ನಾಗಿ ಮಾಡಿದೆ.
ನಾವು ಸ್ವಾತಂತ್ರ್ಯ ತಂದುಕೊಟ್ಟಿದ್ದು, ಸಂವಿಧಾನ ಕೊಟ್ಟಿದ್ದು ಮಾತ್ರವಲ್ಲ. ನಾವು ಪ್ರತಿಯೊಬ್ಬರ ಬದುಕಿನಲ್ಲೂ ಪಾತ್ರ ವಹಿಸಿದ್ದೇವೆ. ನಾವು ಪಕ್ಷದ ತತ್ವ ಸಿದ್ಧಾಂತಗಳನ್ನು ಮರೆತರೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಜವಾಹರಲಾಲ್ ನೆಹರೂ ಅವರು ಹೇಳಿದ್ದಾರೆ.
ಅವರು ಹೇಳಿರುವಂತೆ ಪಕ್ಷದಲ್ಲಿ ಶಿಸ್ತಿನ ವಿಚಾರ ಬಹಳ ಮುಖ್ಯ. ನೀವು ಎಷ್ಟೇ ದೊಡ್ಡ ನಾಯಕರಾಗಿದ್ದರೂ ನಿಮ್ಮ ಅನಗತ್ಯ ಹೇಳಿಕೆಗಳನ್ನು ಪಕ್ಷ ಸಹಿಸಿಕೊಳ್ಳುವುದಿಲ್ಲ. ಯಾರೇ ಆಗಿರಲಿ ಪಕ್ಷದ ಚೌಕಟ್ಟಿನಲ್ಲಿ ಇರುವುದಾದರೆ ಇರಿ, ಇಲ್ಲದಿದ್ದರೆ ನಿಮ್ಮ ದಾರಿ ನೀವು ನೋಡಿಕೊಳ್ಳಿ. ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ.

ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಆಗಲಿ
ಇಲ್ಲಿ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಬೇಕು. ಸಂಸದರಿರಲಿ, ಸಚಿವರಾಗಿರಲಿ, ಶಾಸಕರಾಗಿರಲಿ ಪಕ್ಷದಲ್ಲಿ ನಿಮ್ಮದೇ ಆದ ವಿಚಾರಗಳನ್ನು ಪಕ್ಷದ ಚೌಕಟ್ಟಿನಲ್ಲಿ ಇರಬೇಕು.
ನಿಮ್ಮ ಹಿಂದೆ ಎಷ್ಟು ಜನ ಇರುತ್ತಾರೆ ಎಂಬುದಕ್ಕಿಂತ ನೀವು ಎಷ್ಟು ಜನ ನಾಯಕರನ್ನು ಬೆಳೆಸಿದ್ದೀರಿ ಎಂಬುದು ಮುಖ್ಯ ಎಂದು ಮಹಾತ್ಮ ಗಾಂಧೀಜಿ ಅವರು ಹೇಳಿದ್ದಾರೆ. ಅದೇ ರೀತಿ ನೀವು ಎಷ್ಟು ನಾಯಕರನ್ನು ತಯಾರು ಮಾಡುತ್ತೀರಿ ಎಂಬುದು ಮುಖ್ಯ. ರಾಜೀವ್ ಗಾಂಧಿ ಅವರು ಕೂಡ ನಾಯಕರನ್ನು ಸೃಷ್ಟಿಸುವವನೇ ನಿಜವಾದ ನಾಯಕನೆ ಹೊರತು ಹಿಂಬಾಲಕರನ್ನು ಸೃಷ್ಟಿಸುವವನಲ್ಲ ಎಂದು ಹೇಳಿದ್ದಾರೆ.
ಎಐಸಿಸಿಯಿಂದ ನಮಗೆ ಸಂದೇಶ ಬಂದಿದೆ. ಅದೇನೆಂದರೆ ದೇಶಾದ್ಯಂತ ಪ್ರತಿಭಟನೆ ಮಾಡುತ್ತಿರುವ ರೈತರಿಗೆ ಬೆಂಬಲವಾಗಿ ನಿಲ್ಲಲು ಒಂದು ಕಾರ್ಯಕ್ರಮ ರೂಪಿಸಲಾಗಿದೆ. ನಾವು ಇಲ್ಲಿ 20ರಂದು ಆ ಕಾರ್ಯಕ್ರಮ ಮಾಡುವುದಾಗಿ ತಿಳಿಸಿದ್ದೇವೆ. 20ರಂದು ಕೇವಲ ನೀವುಗಳು ಮಾತ್ರವಲ್ಲ, ನಿಮ್ಮ ಜತೆಗೆ ಕಾರ್ಯಕರ್ತರು, ರೈತರನ್ನು ಕರೆದುಕೊಂಡು ಬೆಂಗಳೂರಿನ ಫ್ರೀಡಂ ಪಾರ್ಕ್ ಗೆ ಆಗಮಿಸಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ.
ಮುಂದಿನ ದಿನಗಳಲ್ಲಿ ಎಐಸಿಸಿ ನಾಯಕರ ನಿರ್ದೇಶನದಂತೆ ಚಾಲಕರ, ಸಹಕಾರಿ, ಸಾಂಸ್ಕøತಿಕ ಘಟಕಗಳನ್ನು ಆರಂಭಿಸುತ್ತಿದ್ದು, ಇವುಗಳನ್ನು ಪಂಚಾಯ್ತಿ ಮಟ್ಟದಿಂದ ಆರಂಭಿಸಲಾಗುವುದು.
ಈ ಪಕ್ಷವನ್ನು ಅಧಿಕಾರಕ್ಕೆ ತರುವತ್ತ ನಾವು ಶ್ರಮಿಸೋಣ. ಮುಂದಿನ ದಿನಗಳಲ್ಲಿ ಉಪಚುನಾವಣೆಗಳು ಬರುತ್ತಿದ್ದು, ನಾವು ಕೆಲವೇ ದಿನಗಳಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು, ಪರಾಜಿತ ಅಭ್ಯರ್ಥಿಗಳು ಎಲ್ಲರೂ ಪ್ರತಿ ಪಂಚಾಯ್ತಿಗೂ ಹೋಗಿ ಸಂಘಟನೆ ಮಾಡಬೇಕು. ಯಾರು ಪಕ್ಷದಿಂದ ಹೊರಹೋಗಿದ್ದಾರೆ, ಯಾರು ಪಕ್ಷದ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟುಕೊಂಡಿದ್ದಾರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದು ಡಿಕೆಶಿ ಪಕ್ಷದ ಕಾರ್ಯಕರ್ತರು, ನಾಯಕರಿಗೆ ಸೂಚನೆ ನೀಡಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: all electionscongress ticketsd k shivakumarkpcc committee
ShareTweetSendShare
Join us on:

Related Posts

cognizant-launches-talent-accelerator-program-hires-489-b-school-graduates-kannada

ಟೆಕ್ ಹಿನ್ನೆಲೆ ಇಲ್ಲದವರಿಗೂ ಕಾಗ್ನಿಜೆಂಟ್‌ನಲ್ಲಿ ಉದ್ಯೋಗ, ಐಐಎಂ ಬೆಂಗಳೂರು ಸೇರಿ 58 ಸಂಸ್ಥೆಗಳ ಪದವೀಧರರ ನೇಮಕ

by admin
August 21, 2026
0

ಬೆಂಗಳೂರು: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ತಂತ್ರಜ್ಞಾನ ಸೇವೆ ಒದಗಿಸುವ ಜಾಗತಿಕ ಮಟ್ಟದ ಮುಂಚೂಣಿ ಸಂಸ್ಥೆ ಕಾಗ್ನಿಜೆಂಟ್ ಭಾರತದಲ್ಲಿ ತನ್ನ ಹೊಸ ಟ್ಯಾಲೆಂಟ್ ಆಕ್ಸಿಲರೇಟರ್ ಕಾರ್ಯಕ್ರಮವನ್ನು ಆರಂಭಿಸಿದೆ....

jeep-compass-85th-anniversary-edition-launched-in-india-price-features-kannada

ಜೀಪ್ 85ನೇ ವಾರ್ಷಿಕೋತ್ಸವ: ಭಾರತದಲ್ಲಿ ಕೇವಲ 85 ಗ್ರಾಹಕರಿಗೆ ಸಿಗಲಿದೆ ‘ಕಾಂಪಾಸ್’ನ ಈ ಸ್ಪೆಷಲ್ ಎಡಿಷನ್ ಎಸ್‌ಯುವಿ!

by admin
August 21, 2026
0

ಬೆಂಗಳೂರು: ಜಗತ್ತಿನ ಖ್ಯಾತ ಎಸ್‌ಯುವಿ ತಯಾರಕ ಕಂಪನಿ ಜೀಪ್ ತನ್ನ 85ನೇ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ಸಂಭ್ರಮವನ್ನು ಇಮ್ಮಡಿಗೊಳಿಸಲು ಕಂಪನಿಯು ಭಾರತದಲ್ಲಿ ತನ್ನ ಅತ್ಯಂತ ಜನಪ್ರಿಯ ಜೀಪ್...

swiggy-launches-guru-24x7-ai-business-partner-for-restaurant-owners-kannada

ಹೋಟೆಲ್ ಮಾಲೀಕರಿಗೆ ಸ್ವಿಗ್ಗಿಯಿಂದ ಹೊಸ ಗಿಫ್ಟ್, ಬಂತು 24×7 ಕೆಲಸ ಮಾಡುವ ಎಐ ಬಿಸಿನೆಸ್ ಪಾರ್ಟ್ನರ್! ಏನಿದು ‘ಗುರು’?

by admin
August 21, 2026
0

ಭಾರತದ ಪ್ರಮುಖ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್ ಸ್ವಿಗ್ಗಿ ತನ್ನ ಹೋಟೆಲ್ ಹಾಗೂ ರೆಸ್ಟೋರೆಂಟ್ ಪಾಲುದಾರರಿಗಾಗಿ ಹೊಚ್ಚಹೊಸ ತಂತ್ರಜ್ಞಾನವೊಂದನ್ನು ಪರಿಚಯಿಸಿದೆ. ಹೋಟೆಲ್ ಉದ್ಯಮವನ್ನು ಮತ್ತಷ್ಟು ಸುಲಭ ಮತ್ತು...

swiggy-leadership-changes-promotions-instamart-food-marketplace-kannada

ಹೊಸ ಹುದ್ದೆ, ಹೊಸ ಜವಾಬ್ದಾರಿ: ಸ್ವಿಗ್ಗಿ ನಾಯಕತ್ವ ತಂಡದಲ್ಲಿ ಮಹತ್ವದ ಬದಲಾವಣೆ!

by admin
August 21, 2026
0

ಹೊಸ ಹುದ್ದೆ, ಹೊಸ ಜವಾಬ್ದಾರಿ: ಸ್ವಿಗ್ಗಿ ನಾಯಕತ್ವ ತಂಡದಲ್ಲಿ ಮಹತ್ವದ ಬದಲಾವಣೆ! ಬೆಂಗಳೂರು: ಆನ್‌ಲೈನ್ ಫುಡ್ ಡೆಲಿವರಿ ಹಾಗೂ ಕ್ವಿಕ್ ಕಾಮರ್ಸ್ ವಲಯದಲ್ಲಿ ಮುಂಚೂಣಿಯಲ್ಲಿರುವ ಸ್ವಿಗ್ಗಿ ತನ್ನ...

bgmi-lite-announced-pre-registration-launch-date-low-end-phones-kannada

ಗೇಮಿಂಗ್‌ ಪ್ರಿಯರಿಗೆ ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ!

by admin
August 21, 2026
0

ಗೇಮಿಂಗ್‌ ಪ್ರಿಯರಿಗೆ ಗುಡ್ ನ್ಯೂಸ್‌ : ಕಡಿಮೆ ಸಾಮರ್ಥ್ಯದ ಫೋನ್‌ಗಳಿಗಾಗಿ ಬರ್ತಿದೆ BGMI LITE, ಶೀಘ್ರದಲ್ಲೇ ಪ್ರೀ-ರಿಜಿಸ್ಟ್ರೇಷನ್ ಆರಂಭ! ಬೆಂಗಳೂರ: ಮೊಬೈಲ್ ಗೇಮ್ ಪ್ರಿಯರಿಗೆ, ಅದರಲ್ಲೂ ವಿಶೇಷವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram