Commonwealth Games 2022 – ಭಾರತಕ್ಕೆ ಎರಡನೇ ಪದಕ ತಂದುಕೊಟ್ಟ ಕನ್ನಡಿಗ
ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು, ವೇಟ್ ಲಿಫ್ಟಿಂಗ್ನಲ್ಲಿ ಕುಂದಾಪುರ ಮೂಲದ ಕನ್ನಡಿಗ ಪಿ. ಗುರುರಾಜ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಭಾರತಕ್ಕೆ ಎರಡನೇ ಪದಕ ತಂದುಕೊಟ್ಟಿದ್ದಾರೆ.
61 ಕೆಜಿ ವಿಭಾಗದಲ್ಲಿ ಒಟ್ಟು 269 ಕೆಜಿ ಭಾರ ಎತ್ತುವ ಮೂಲಕ ಗುರುರಾಜ್ ಪೂಜಾರಿ ಈ ಸಾಧನೆ ಮಾಡಿದ್ದಾರೆ.
ಮೂಲತಃ ಕುಂದಾಪುರದವರಾಗಿರುವ ಗುರುರಾಜ್ ಪೂಜಾರಿ, ಫೈನಲ್ನಲ್ಲಿ ಕೆನಡಾದ ಯೂರಿ ಸಿಮರ್ಡ್ ವಿರುದ್ಧ ಸೆಣಸಾಡಿದರು.
ಗುರುರಾಜ್ ಅವರು ತಮ್ಮ ಮೊದಲ ಸ್ನ್ಯಾಚ್ ಪ್ರಯತ್ನದಲ್ಲಿ 114 ಕೆಜಿ ಮತ್ತು ಎರಡನೇ ಸುತ್ತಿನಲ್ಲಿ 118 ಕೆಜಿ ಎತ್ತಿದರು. ಕ್ಲೀನ್ ಮತ್ತು ಜರ್ಕ್ ಸುತ್ತಿನಲ್ಲಿ, ಭಾರತೀಯ ವೇಟ್ಲಿಫ್ಟರ್ ಗುರುರಾಜ್ ಪೂಜಾರಿ ತಮ್ಮ ಮೂರನೇ ಪ್ರಯತ್ನದಲ್ಲಿ 151 ಕೆಜಿ ಎತ್ತುವ ಮೂಲಕ ಕಂಚಿನ ಪದಕವನ್ನು ಗೆದ್ದಿದ್ದಾರೆ.
ಗುರುರಾಜ್ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಅಭಿನಂದನೆ ತಿಳಿಸಿದ್ದಾರೆ. ಪಿ.ಗುರುರಾಜರ ಸಾಧನೆ ಅತೀವ ಸಂತಸ ತಂದಿದೆ. ಕಾಮನ್ವೆಲ್ತ್ ಗೇಮ್ಸ್ನಲ್ಲಿ ಕಂಚು ಗೆದ್ದಿದ್ದಕ್ಕಾಗಿ ಅಭಿನಂದನೆಗಳು. ಅವರ ಕ್ರೀಡಾ ಪಯಣದಲ್ಲಿ ಇನ್ನೂ ಹಲವು ಮೈಲಿಗಲ್ಲುಗಳು ಮೂಡಲಿ ಎಂದು ಹಾರೈಸುತ್ತೇನೆ. ಎಂದು ಟ್ವೀಟ್ ಮಾಡಿದ್ದಾರೆ.
https://twitter.com/narendramodi/status/1553364876906487808








