H D Kumaraswamy | ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಜಾಲತಾಣಗಳ ಮೂಲಕ ಬೆಂಕಿ
ಬೆಂಗಳೂರು : ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಜಾಲತಾಣಗಳ ಮೂಲಕ ಬೆಂಕಿ ಹಾಕಲಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಹುಬ್ಬಳ್ಳಿ ಗಲಭೆ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಹೆಚ್ ಡಿ ಕುಮಾರಸ್ವಾಮಿ, ಕುಂದಾಪುರದಿಂದ ಹಿಡಿದು ಹುಬ್ಬಳ್ಳಿವರೆಗೆ ನಡೆದ ಎಲ್ಲ ಘಟನೆಗಳನ್ನು ನೋಡಿದರೆ ಎದ್ದು ಕಾಣುವುದು ರಾಜ್ಯ ಸರಕಾರದ ಘೋರ ವೈಫಲ್ಯ. ಬಿಗಿಕ್ರಮ ಕೈಗೊಳ್ಳುವ ಬದಲಿಗೆ ಸರಕಾರ ಬೀಡುಬೀಸಾಗಿ ವರ್ತಿಸಿದ್ದೇ ಇಂಥ ಘಟನೆಗಳಿಗೆ ಕಾರಣ. ಹುಬ್ಬಳ್ಳಿ ಘಟನೆಯನ್ನು ಮುಖ್ಯಮಂತ್ರಿ & ಗೃಹ ಸಚಿವರು ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಜಾಲತಾಣಗಳ ಮೂಲಕ ಬೆಂಕಿ ಹಾಕಲಾಗುತ್ತಿದೆ. ʼಕೆಲ ಕಿಡಿಗೇಡಿಗಳಿಗೆ ಕಿಚ್ಚೆಂದರೆ ಬಲು ಇಷ್ಟವೆಂಬಂತೆ ಇದೆ.ʼ ʼಅವರಿಗೆ ಸೋಶಿಯಲ್ ಮೀಡಿಯಾ ಹಿಂಸೆ ಹರಡುವ ಟೂಲ್ʼಕಿಟ್ ಆಗಿಬಿಟ್ಟಿದೆ.ʼ ʼಪೊಲೀಸರು, ಮೊದಲು ಅಂಥವರ ಬುಡಕ್ಕೆ ಬೆಂಕಿ ಇಡಬೇಕಿದೆ.ʼ 8/10
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 17, 2022
ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಜಾಲತಾಣಗಳ ಮೂಲಕ ಬೆಂಕಿ ಹಾಕಲಾಗುತ್ತಿದೆ. ʼಕೆಲ ಕಿಡಿಗೇಡಿಗಳಿಗೆ ಕಿಚ್ಚೆಂದರೆ ಬಲು ಇಷ್ಟವೆಂಬಂತೆ ಇದೆ.ʼ ʼಅವರಿಗೆ ಸೋಶಿಯಲ್ ಮೀಡಿಯಾ ಹಿಂಸೆ ಹರಡುವ ಟೂಲ್ʼಕಿಟ್ ಆಗಿಬಿಟ್ಟಿದೆ.ʼ ʼಪೊಲೀಸರು, ಮೊದಲು ಅಂಥವರ ಬುಡಕ್ಕೆ ಬೆಂಕಿ ಇಡಬೇಕಿದೆ.ʼ
ಎರಡೂ ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ-ಕಾಂಗ್ರೆಸ್ ಪಕ್ಷಗಳಿಗೆ ಇಂಥ ಕಿಡಿಗೇಡಿ ಘಟನೆಗಳೆಂದರೆ ಬಲು ಇಷ್ಟ. ಚುನಾವಣೆಗೆ ಸಜ್ಜಾಗುತ್ತಿರುವ ಕರ್ನಾಟಕವನ್ನು ಒಡೆದು ಆಳುವ ಮೂಲಕ ʼಬ್ರಿಟೀಷ್ ನೀತಿʼಯನ್ನೇ ಇವು ಅನುಸರಿಸುತ್ತಿವೆ. ಈ ಪಕ್ಷಗಳ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕಿದೆ.
ಹುಬ್ಬಳ್ಳಿ ಇನ್ನೊಂದು ಡಿಜೆ ಹಳ್ಳಿ ಆಗುವುದನ್ನು ಪರಿಣಾಮಕಾರಿಯಾಗಿ ತಡೆದ ಹುಬ್ಬಳ್ಳಿ-ಧಾರವಾಡ ನಗರದ ಪೊಲೀಸ್ ಆಯುಕ್ತರು ಹಾಗೂ ಇಡೀ ಪೊಲೀಸ್ ಸಿಬ್ಬಂದಿಗೆ ನನ್ನ ಅಭಿನಂದನೆಗಳು. ಸಕಾಲಕ್ಕೆ ಅವರು ಎಚ್ಚೆತ್ತ ಪರಿಣಾಮ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. 6/10
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 17, 2022
ನಿರುದ್ಯೋಗ, ಬೆಲೆ ಏರಿಕೆ, ಹಣದುಬ್ಬರದಿಂದ ಬರ್ಬರವಾದ ಜನರ ಬದುಕಿನ ಬಗ್ಗೆ ʼಸೋಶಿಯಲ್ ಮೀಡಿಯಾ ಶೂರರ ಮೌನ ಅಪಾಯಕಾರಿ.ʼ ಅಲ್ಲದೆ; ರಾಷ್ಟ್ರೀಯ ಪಕ್ಷಗಳ ಕಾಣದ ಕೈಚಳಕ, ಮೌನ ಕುಮ್ಮಕ್ಕು ವಿನಾಶಕಾರಿ ಎಂದು ಆತಂಕ ಹೊರಹಾಕುತ್ತಿದ್ದಾರೆ.
communal-tension-in-old-hubballi h-d-kumaraswamy-reaction








