ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Karnataka Election) ಎಐಎಂಐಎಂ (AIMIM) ಪಕ್ಷದಿಂದ 25 ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ ಎಂದು ಅಸಾದುದ್ದೀನ್ ಓವೈಸಿ (Asaduddin Owaisi) ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಲದೇ, ನಮ್ಮ ಪಕ್ಷ ಜೆಡಿಎಸ್ (JDS) ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಇಚ್ಛಿಸಿದೆ ಎಂದು ಹೇಳಿದ್ದಾರೆ. ಈಗಾಗಲೇ ಮೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ. ಮೈತ್ರಿಯಾಗದೇ ಇದ್ದರೆ ನಮ್ಮ ಅಭ್ಯರ್ಥಿಗಳನ್ನು ಇಳಿಸುತ್ತೇವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಮ್ಮ ವಿರುದ್ಧ ಆಧಾರ ರಹಿತ ಆರೋಪ ಮಾಡಿದೆ. ಹೀಗಾಗಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಇದ್ದಾರೆ.
ಮುಸ್ಲಿಂರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು (Reservation) ರದ್ದುಗೊಳಿಸಿದ ಸರ್ಕಾರದ ನಿರ್ಧಾರವನ್ನು ಸಂಪೂರ್ಣ ಕಾನೂನುಬಾಹಿರ ಎಂದ ಓವೈಸಿ ಬಿಜೆಪಿ ಸರ್ಕಾರದ ನಿರ್ಧಾರವನ್ನು ಖಂಡಿಸಿದ್ದಾರೆ.








