ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ನಿನ್ನೆ ಸಿಎಂ ಮುಖ್ಯಮಂತ್ರಿಗಳ ಕುರಿತು ಮಾತನಾಡುತ್ತಾ ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟಾಚಾರ ಮಾಡುತ್ತಾರೆ ಎಂದು ಜಾತಿಯನ್ನು ಉಲ್ಲೇಖಿಸಿ ಆರೋಪಿಸಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ರೀತಿಯಲ್ಲಿಯೇ ನಿರ್ದಿಷ್ಟ ಸಮುದಾಯದ ಅವಹೇಳನ ಮಾಡಿದ್ದು, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಲಾಗಿದೆ.
ಲಿಂಗಾಯದ ಸಮುದಾಯದ ವಕೀಲ ಬಸವರಾಜ ಹಳ್ಳದ್ ಹಾಗೂ ಹಲವರು ಸಿದ್ದರಾಮಯ್ಯ ಅವರ ವಿರುದ್ಧ ಮುಖ್ಯ ಚನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ. ಅಲ್ಲದೇ, ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿದೆ.