ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ದೂರು hamsalekha saaksha tv
ಬೆಂಗಳೂರು : ಪೇಜಾವರ ಶ್ರೀಗಳ ವಿಚಾರವಾಗಿ ಲೇವಡಿ ಮಾಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ದೂರು ದಾಖಲಾಗಿದೆ.
ಕೃಷ್ಣರಾಜ್ ಎಂಬುವರು ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ದೂರು ದಾಕಲಿಸಿದ್ದಾರೆ.
ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಂಸಲೇಖ ಅವರು ಪೇಜಾವರ ಸ್ವಾಮೀಜಿಗಳ ಬಗ್ಗೆ ಲೇವಡಿ ಮಾಡಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಇದಕ್ಕೆ ಕೆಲವರು ವಿರೋಧ ವ್ಯಕ್ತಪಡಿಸಿದ್ದರು. ಕೂಡಲೇ ಹಂಸಲೇಖ ಅವರು ಕ್ಷಮೆ ಕೋರಿದ್ದರು.
ಇದೀಗ ಹಂಸಲೇಖ ಅವರು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತೆ ಮಾತನಾಡಿದ್ದಾರೆ ಎಂದು ಆರೋಪಿಸಿ ಕೃಷ್ಣರಾಜ್ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದಾರೆ.