ಬೆಂಗಳೂರು: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂಬ ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
ನಗರದಲ್ಲಿನ ಸಂಜಯನಗರ ಪೊಲೀಸ್ ಠಾಣೆಗೆ ಸಚಿವ ದಿನೇಶ್ ಗುಂಡೂರಾವ್ ಪತ್ನಿ ಟಬು ರಾವ್ ದೂರು ನೀಡಿದ್ದಾರೆ. ಇದಕ್ಕೂ ಮುನ್ನ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಟಬು ರಾವ್ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಟಬು, ಬಸನಗೌಡ ಪಾಟೀಲ್ ಯತ್ನಾಳ್ ಯಾರು ಎಂಬುವುದೇ ನನಗೆ ಗೊತ್ತಿಲ್ಲ. ನಾನು ರಾಜಕೀಯದಲ್ಲಿಲ್ಲ. ಭಾರತ ಮಾತೆ ಅಂತಾರೆ, ಇದೇನಾ ಇವರು ಕೊಡುವ ಗೌರವ? ದಿನೇಶ್ ಬಗ್ಗೆ ಮಾತನಾಡಿದರೆ ಪರವಾಗಿಲ್ಲ. ನನ್ನ ಬಗ್ಗೆ ಮಾತನಾಡಿರುವುದು ತಪ್ಪು ಎಂದು ವಾಗ್ದಾಳಿ ನಡೆಸಿದ್ದಾರೆ.