ಕೊರೊನಾ ನಿಯಮ ಉಲ್ಲಂಘನೆ : ಕೇರಳ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ದೂರು
ಕೇರಳ : ಕೇರಳ ಮುಖ್ಯಮಂತ್ರಿಗಳಾದ ಪಿಣರಾಯಿ ವಿಜಯನ್ ಕೋವಿಡ್ ಮಾರ್ಗಸೂಚಿಗಳು ಹಾಗೂ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿದ್ದಾರೆಂದು ಆರೋಪಿಸಿ ಅವರ ವಿರುದ್ಧ ದೂರು ದಾಖಲು ಮಾಡಲಾಗಿದೆ. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಎಲ್‌ಡಿಎಫ್ ನಾಯಕರ ವಿರುದ್ಧ ಕೇಂದ್ರದ ಮಾಜಿ ಸಚಿವ, ಕೇರಳ ಕಾಂಗ್ರೆಸ್‌ನ ಹಿರಿಯ ನಾಯಕ ಪಿ.ಸಿ. ಥಾಮಸ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ತಿರುವನಂತಪುರ ಜಿಲ್ಲೆಯಲ್ಲಿ ಲಾಕ್‌ಡೌನ್ ವಿಧಿಸಲಾಗಿದೆ. ಈ ಸ್ಥಿತಿಯಲ್ಲಿ ಇಲ್ಲಿನ ಎಕೆಜಿ ಕೇಂದ್ರದಲ್ಲಿ ವಿಜಯನ್ ಮತ್ತು ಇತರ 22 ಮಂದಿ ಕಾನೂನುಬಾಹಿರವಾಗಿ ಗುಂಪುಗೂಡಿದ್ದಾರೆ. ದೈಹಿಕ ಅಂತರ ಪಾಲಿಸದೇ ವಿಧಾನಸಭಾ ಚುನಾವಣೆಯ ಗೆಲುವನ್ನು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ ಎಂದು ಥಾಮಸ್ ದೂರಿದ್ದಾರೆ. ಕೇರಳ ಸಾಂಕ್ರಾಮಿಕ ರೋಗಗಳ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳ ಅಡಿಯಲ್ಲಿ ಈ ಕೃತ್ಯವು ಶಿಕ್ಷಾರ್ಹ ಅಪರಾಧವಾಗಿದೆ. ಕೇಂದ್ರದ ಮಾರ್ಗಸೂಚಿಗಳು ಮತ್ತು ಸಾಂವಿಧಾನಿಕ ಮಾನದಂಡಗಳ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ಧಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








