ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತಕ್ಕೆ (lokayukta) ದೂರು ಸಲ್ಲಿಕೆಯಾಗಿದೆ.
ಚುನಾವಣಾ ಸಂದರ್ಭದಲ್ಲಿ ಆಸ್ತಿ ಕುರಿತು ಸರಿಯಾದ ಮಾಹಿತಿ ನೀಡಿಲ್ಲ ಎಂದು ಆರೋಪಿಸಿ, ಸಾಮಾಜಿಕ ಹೋರಾಟಗಾರ ಸಿ.ಎಸ್.ಸಿದ್ದರಾಜು ದೂರು ನೀಡಿದ್ದಾರೆ. 2004 ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೇತನಗಾನಹಳ್ಳಿಯಲ್ಲಿ 24 ಎಕರೆ ಜಮೀನಿರುವ ಕುರಿತು ಉಲ್ಲೇಖಿಸಿದ್ದಾರೆ. ವಿವಿಧ ಸರ್ವೇ ನಂಬರ್ ಗಳಲ್ಲಿ 1,2,3,4 ಎಕರೆ ಜಮೀನು ಖರೀದಿ ಮಾಡಿರುವುದಾಗಿ ಹೇಳಿದ್ದಾರೆ. ಇದರ ಮೂಲ ಏನು ಎಂದು ಪ್ರಶ್ನಿಸಿದ್ದಾರೆ.
2008 ಹಾಗೂ 2018ರ ಚುನಾವಣೆಯ ಅಫಿಡವಿಟ್ ನಲ್ಲಿ ಬೆಂಗಳೂರಿನ ಜೆಪಿ ನಗರದ ಮನೆ ಖರೀದಿ ಮಾಡಿದ್ದಾಗಿ ಉಲ್ಲೇಖಿಸಿದ್ದಾರೆ. 2023ರ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅದೇ ಮನೆಯನ್ನು 1995ರಲ್ಲಿ ಖರೀದಿಸಿರುವ ಕುರಿತು ಮಾಹಿತಿ ನೀಡದ್ದಾರೆ. ಕುಪೇಂದ್ರ ರೆಡ್ಡಿ ಅವರಿಂದ 9 ಕೋಟಿ 50 ಲಕ್ಷ ರೂ. ಸಾಲ ಪಡೆರುವುದಾಗಿ ಹೇಳಿದ್ದಾರೆ. ಆದರೆ, 2022 ರಲ್ಲಿ ಕುಪೇಂದ್ರ ರೆಡ್ಡಿ ಅವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಚೆನ್ನಾಂಬಿಕ ಫಿಲ್ಮ್ ಸಂಸ್ಥೆಗೆ 4 ಕೋಟಿ ಕೊಟ್ಟಿರುವುದಾಗಿ ಹೇಳಿ, ದೂರು ದಾಖಲಿಸಿದ್ದಾರೆ.