ಚಿಕ್ಕಬಳ್ಳಾಪುರದಲ್ಲಿ ಸಂಪೂರ್ಣ ಲಾಕ್ ಡೌನ್ : ಬೇಕಾಬಿಟ್ಟಿ ಓಡಾದ್ರೆ ಲಾಠಿ ಏಟು
ಚಿಕ್ಕಬಳ್ಳಾಪುರ : ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಗ್ರಾಮೀಣ ಭಾಗದಲ್ಲೂ ಪ್ರತಿದಿನ ಕೊರೊನಾ ಸ್ಫೋಟವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಕೊರೊನಾ ಹುಚ್ಚು ಕುದುರೆಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಕಂಪ್ಲೀಟ್ ಲಾಕ್ ಡೌನ್ ಘೋಷಣೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಪೊಲೀಸರು ಫುಲ್ ಹೈ ಅಲರ್ಟ್ ಆಗಿದ್ದು, ಬೆಳ್ಳಂ ಬೆಳಿಗ್ಗೆ ರಸ್ತೆಗಿಳಿದು ಬೇಕಾಬಿಟ್ಟಿ ಓಡಾಡುವವರಿಗೆ ಲಾಠಿ ರುಚಿ ತೋರಿಸಿದ್ದಾರೆ.
ಜಿಲ್ಲೆಯ ಚಿಂತಾಮಣಿಯಲ್ಲಿ ಅನಗತ್ಯವಾಗಿ ರಸ್ತಗೆ ಬಂದವರಿಗೆ ಖಾಕಿ ಲಾಠಿಯಲ್ಲಿ ಪಾಠ ಹೇಳಿದ್ದು, ಸೂಕ್ತ ದಾಖಲೆಗಳಿಲ್ಲದ ವಾಹನಗಳನ್ನು ಸೀಸ್ ಮಾಡಿದ್ದಾರೆ.