4.0 ಲಾಕ್ ಡೌನ್ ಅವಧಿ ವಿಸ್ತರಣೆ ಮಾಡಿ ಕೇಂದ್ರ ಸರ್ಕಾರ ಗೈಡ್ ಲೈನ್ಸ್ ನೀಡಿತ್ತು. ಜೊತೆಗೆ ಕೆಲ ನಿರ್ಧಾರಗಳನ್ನು ತೆಗೆದುಕೊಳ್ಳಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಇಂದು 11 ಗಂಟೆಗೆ ಹಿರಿಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಯಡಿಯೂರಪ್ಪ, ರಾಜ್ಯದ ಜನರಿಗೆ ಸ್ವಲ್ಪಮಟ್ಟಿನ ರೀಲಿಫ್ ನೀಡಿದ್ದಾರೆ. ಮೇ 31 ಲಾಕ್ ಡೌನ್ ಮುಂದುವರೆಯುತ್ತದೆ. ಕಂಟೇನ್ ಮೆಂಟ್ ಪ್ರದೇಶದಲ್ಲಿ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು. ಯಾರಾದರೂ ನಿಯಮ ಉಲ್ಲಂಘನೆ ಮಾಡಿದ್ರೆ ಕ್ರಿಮಿನಲ್ ಕೇಸ್ ದಾಖಲು ಮಾಡುತ್ತೇವೆ. ನಾಳೆಯಿಂದ ಖಾಸಗಿ ಬಸ್ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ರಾಜ್ಯದೊಳಗೆ ಬಸ್ ಸಂಚಾರಕ್ಕೆ ಅವಕಾಶವಿದೆ. ಒಂದು ಬಸ್ ನಲ್ಲಿ 30 ಜನ ಪ್ರಯಾಣಿಕರು ಮಾತ್ರ ಪ್ರಯಾಣ ಮಾಡಬಹುದು. ಕಂಟೇನ್ ಮೆಂಟ್ ಪ್ರದೇಶ ಹೊರತು ಪಡಿಸಿ ಉಳಿದ ಕಡೆ ಬಸ್ ಸಂಚಾರಕ್ಕೆ ಮುಕ್ತ ಅವಕಾಶವಿದೆ. ಆಟೋ, ಟ್ಯಾಕ್ಸಿ ಸಂಚಾರಕ್ಕೆ ಅವಕಾಶವಿದೆ. ರಾಜ್ಯದಲ್ಲಿ ಪ್ರತಿ ಭಾನುವಾರ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗುತ್ತದೆ. ಎಲ್ಲಾ ಪಾರ್ಕ್ ಗಳು ಓಪನ್ ಮಾಡಲಾಗುತ್ತದೆ. ಬೆಳಿಗ್ಗೆ 7 ರಿಂದ 9 ಮತ್ತು ಸಂಜೆ 5 ರಿಂದ 7 ಗಂಟೆಗೆ ವಾಯು ವಿಹಾರಕ್ಕೆ ಮುಕ್ತ ಅವಕಾಶವಿದೆ. ಸಲೂನ್ ಶಾಪ್ ಓಪನ್ ಆಗುತ್ತವೆ. ಬೀದಿ ಬದಿ ವ್ಯಾಪಾರ ನಡೆಸಬಹುದು ಎಂದು ಬಿಎಸ್ ವೈ ಹೇಳಿದ್ದಾರೆ.
ಮನೆ ವಿಚಾರಕ್ಕೆ ಬಂದ್ರೆ ಹುಷಾರ್ ಅನಿತಾ ಕುಮಾರಸ್ವಾಮಿ ಖಡಕ್ ವಾರ್ನಿಂಗ್ ಬೆನ್ನಲ್ಲೇ ಕ್ಷಮೆಯಾಚಿಸಿದ ಸಚಿವ ಎಂಬಿ ಪಾಟೀಲ್
ರಾಜ್ಯ ರಾಜಕಾರಣದಲ್ಲಿ ಬಿಡದಿ ಟೌನ್ ಶಿಪ್ ವಿವಾದ ಈಗ ತಾರಕಕ್ಕೇರಿದೆ. ರಾಜಕೀಯ ಕೆಸರೆರಚಾಟದ ನಡುವೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರ ಎಂಟ್ರಿ ದೊಡ್ಡ ಸಂಚಲನ ಮೂಡಿಸಿದೆ....








