ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಗೆ ಹೆಚ್ಚಿದ ಒತ್ತಡ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ಆರ್ಭಟ ಮಿತಿ ಮೀರಿದೆ. ಪ್ರತಿ ದಿನ ರಾಜ್ಯದಲ್ಲಿ ಕೊರೊನಾ ಸ್ಫೋಟವಾಗುತ್ತಿದ್ದು, ನೂರಾರು ಮಂದಿ ಕೊನೆಯುಸಿರೆಳೆಯುತ್ತಿದ್ದಾರೆ.
ಈ ಮಧ್ಯೆ ಆಸ್ಪತ್ರೆಗಳಲ್ಲಿ ಆಕ್ಸಿಜನ್, ಬೆಡ್ ಸಮಸ್ಯೆ ಕೂಡ ಹೆಚ್ಚಾಗುತ್ತಿದ್ದು, ಜನರು ಆತಂಕದಲ್ಲಿದ್ದಾರೆ. ಇನ್ನು ಕೊರೊನಾ ಕಂಟ್ರೋಲ್ ಗೆ ಬ್ರೇಕ್ ಹಾಕಲು ಸರ್ಕಾರ ಕಳೆದ ತಿಂಗಳು ಘೋಷಿಸಿರುವ ಕೊರೊನಾ ಕಫ್ರ್ಯೂ ಅಂದಕೊಂಡಷ್ಟು ಯಶಸ್ಸಾಗಿಲ್ಲ.
ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಗೆ ತಜ್ಞರು ಸಲಹೆ ನೀಡಿದ್ದಾರೆ.
ನಿನ್ನೆ ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಇದು ದ್ವಿಗುಣ ಆಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸದ್ಯ ಲಾಕ್ ಡೌನ್ ಹೇರುವುದೇ ಸೂಕ್ತ ಎಂದು ಮುಖ್ಯಮಂತ್ರಿಗಳಿಗೆ ತಜ್ಞರು ಸಲಹೆ ನೀಡಿದ್ದಾರೆ.
ಈ ಮಧ್ಯೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕೂಡ ಲಾಕ್ ಡೌನ್ ಅನಿವಾರ್ಯ ಎಂದಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯ ಇರುವ ಕಫ್ರ್ಯೂ ನಾವು ಅಂದುಕೊಂಡಷ್ಟು ಯಶಸ್ಸು ಕಂಡಿಲ್ಲ.
ಮುಂದಿನ ನಿರ್ಧಾರಗಳ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರ ಜೊತೆ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ.










