ದಕ್ಷಿಣ ಕನ್ನಡ: ಚರಂಡಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಕಾಂಪೌಂಡ್ ಕುಸಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಸುರತ್ಕಲ್ (Surathkal) ಹತ್ತಿರ ನಡೆದಿದೆ.
ಈ ಘಟನೆ ಕೃಷ್ಣಾಪುರದ ಕೆಇಬಿ ಬಳಿ ನಡೆದಿದೆ. ಬಜ್ಪೆ ಕರಂಬಾರು ಗ್ರಾಮದ ನಿವಾಸಿ ಹನೀಫ್(51) ಸಾವನ್ನಪ್ಪಿದ ವ್ಯಕ್ತಿ ಎನ್ನಲಾಗಿದೆ. ಘಟನೆಯಲ್ಲಿ ಮತ್ತೋರ್ವ ಕಾರ್ಮಿಕ ಮಣಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಏಕಾಏಕಿ ಮನೆ ಕಾಂಪೌಂಡ್(Compound) ಕುಸಿದು, ಚರಂಡಿ ಕೆಲಸ ಮಾಡುತ್ತಿದ್ದವರ ಮೇಲೆ ಕುಸಿದಿದೆ. ಈ ಕುರಿತು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.