ಬೆಂಗಳೂರಿನ ನಗರತ್ ಪೇಟೆಯಲ್ಲಿ ನಡೆದ ಮತಾಂಧ ಹಲ್ಲೆ ಖಂಡಿಸಿ ಹನುಮಾನ್ ಚಾಲೀಸಾ ಪಠಿಸುವ ಮೂಲಕ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಈ ರ್ಯಾಲಿಯಲ್ಲಿ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ ರಾಮಮೂರ್ತಿ, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಸಾಕಷ್ಟು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಸ್ಥಳಕ್ಕೆ ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಭೇಟಿ ನೀಡಿದ್ದರು. ಹಲ್ಲೆಗೊಳಗಾದ ಯುವಕ ಮುಖೇಶ್ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಅಂಗಡಿ ಕೃಷ್ಣ ಟೆಲಿಕಾಂ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹನುಮಾನ್ ಚಾಲೀಸಾ ಪಠಿಸಲಾಯಿತು.
ಹಲ್ಲೆಗೊಳಗಾದ ಮುಖೇಶ್ನನ್ನು ಪೊಲೀಸರು ಜೀಪ್ನಲ್ಲಿ ಕರೆದೊಯ್ಯಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಪೊಲೀಸ್ ವಾಹನದ ಮುಂದೆ ಶಾಸಕ ಸುರೇಶ್ ಕುಮಾರ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರೊಂದಿಗೆ ವಾಗ್ವಾದ ನಡೆಯಿತು. ನೂಕಾಟ, ತಳ್ಳಾಟ ನಡೆಯಿತು.