ದ.ಕ. ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಈ ನಡುವೆ ಬೋಳೂರಿನಲ್ಲಿ ಸೋಂಕಿತೆಯಾಗಿರುವ ಮಹಿಳೆಯ ಸ್ಥಿತಿ ಗಂಭೀರವಾಗಿದೆ. ಇನ್ನು 80 ವರ್ಷದ ಕುಲಶೇಖರದ ಮಹಿಳೆಯ ಆರೋಗ್ಯ ಸ್ಥಿತಿ ನಾಜೂಕಾಗಿದೆ ಎಂದು ಜಿಲ್ಲಾಡಳಿತ ವರದಿ ಮಾಡಿದೆ.
ಈ ಬಗ್ಗೆ ದ.ಕ. ಜಿಲ್ಲಾಡಳಿತ ಅಧಿಕೃತ ಮಾಹಿತಿ ನೀಡಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿ ಮಾಡಿದೆ. 58 ವರ್ಷದ ಬೋಳೂರಿನ ಮಹಿಳೆಗೆ ಸದ್ಯ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ. ಮಹಿಳೆಯ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡಿಲ್ಲ ಎಂದು ಬುಧವಾರದಂದು ಜಿಲ್ಲಾಡಳಿತ ವರದಿ ನೀಡಿತ್ತು. ಇದೀಗ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದೆ.
ಇನ್ನು ಕುಲಶೇಖರದ 80 ವರ್ಷದ ಮಹಿಳೆಯ ಆರೋಗ್ಯ ಸ್ಥಿತಿ ನಾಜೂಕಾಗಿದೆ ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ. ಈ ಮಹಿಳೆ ಅಧಿಕ ರಕ್ತದೊತ್ತಡ ಹಾಗೂ ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಸದ್ಯ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಕೋವಿಡ್ ಆಸ್ಪತ್ರೆಯಲ್ಲಿ 12 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇವರ ಪೈಕಿ 10 ಮಂದಿಯ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ತಿಳುದು ಬಂದಿದೆ.