ಕಾರು ಪಾರ್ಕಿಂಗ್ ವಿಚಾರಕ್ಕೆ ಗಲಾಟೆ – ವ್ಯಕ್ತಿಯ ಕೊಲೆಯಲ್ಲಿ ಅಂತ್ಯ…
ದೇವಸ್ಥಾನದ ಜಮೀನು ವಿವಾದ, ಕಾರು ಪಾರ್ಕಿಂಗ್ ವಿಚಾರದಲ್ಲಿ ಮತ್ತೆ ಭುಗಿಲೆದ್ದು, ವ್ಯಕ್ತಿಯ ಕೊಲೆಯಲ್ಲಿ ಅಂತ್ಯಗಿರುವ ಭೀಕರ ಘಟನೆ ಶನಿವಾರ ತಡರಾತ್ರಿ ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಕೆಲ ವರ್ಷಗಳಿಂದ ದೇವಸ್ಥಾನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇದ್ದ ಜಗಳ ಶನಿವಾರ ರಾತ್ರಿ ಕಾರು ಪಾರ್ಕಿಂಗ್ ಮಾಡುವ ವಿಷಯಕ್ಕೆ ಘರ್ಷಣೆಯಾಗಿ,ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ಗಲಾಟೆಯಲ್ಲಿ ಸತೀಶ್ ಪಾಟೀಲ್(37) ವ್ಯಕ್ತಿಯನ್ನ ಕೊಲೆ ಮಾಡಲಾಗಿದೆ. ರೊಚ್ಚಿಗೆದ್ದ ಗ್ರಾಮಸ್ಥರು ವಾಹನಗಳಿಗೆ ಬೆಂಕಿ ಹಚ್ಚಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಇದಕ್ಕೆ ಸಂಬಂಧಿಸಿದಂತೆ ಸುಮಾರು 20 ಮಂದಿಯನ್ನು ಪೊಲೀಸರು ನಸುಕಿನ ಜಾವ ಬಂಧಿಸಿದ್ದಾರೆ ಎನ್ನಲಾಗಿದೆ. ಗ್ರಾಮದ ಬೈರೋನಾಥ ದೇವಸ್ಥಾನಕ್ಕೆ ಸೇರಿದ ಜಮೀನು ಉಳಿಸಿಕೊಳ್ಳಲು ಸತೀಶ್ ಪಾಟೀಲ್ ಹೋರಾಟ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.








