ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ‘ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ರಕ್ಷಿಸಿ’ ಹೆಸರಿನಡಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂಸದ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕೆಪಿಸಿಸಿ ಕಚೇರಿಯಿಂದ ರಾಜಭವನವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.
ಕೆಪಿಸಿಸಿ ಕಚೇರಿಯಿಂದ ಹೊರಟ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರನ್ನು ಇಂಡಿಯನ್ ಎಕ್ಸ್ಪ್ರೆಸ್ ವೃತ್ತದ ಬಳಿ ತಡೆಯಲಾಯಿತು. ಹೀಗಾಗಿ ಸಿದ್ದರಾಮಯ್ಯ ಡಿಕೆಶಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಅಲ್ಲೇ ಕುಳಿತು ಧರಣಿ ಆರಂಭಿಸಿದರು.
ಇಂಡಿಯನ್ ಎಕ್ಸ್ಪ್ರೆಸ್ ವೃತ್ತದಲ್ಲಿ ಧರಣಿ ಕುಳಿತ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು, ಬಿಎಂಟಿಸಿ ಬಸ್ಗಳಲ್ಲಿ ಕರೆದೊಯ್ಯಲಾಯಿತು.
ಪಿಪಿಇ ಕಿಟ್ಗಳನ್ನು ಧರಿಸಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.
ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನರೇಂದ್ರ ಮೋದಿ ಸರ್ಕಾರ ದಾಳಿ ನಡೆಸುತ್ತಿದೆ. ಕರ್ನಾಟಕ ಬಳಿಕ ರಾಜಸ್ಥಾನ, ಮಧ್ಯಪ್ರದೇಶದಲ್ಲೂ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ. ಭಾರತ ದೇಶ ಅತ್ಯಂತ ದೊಡ್ಡ ಪ್ರಜಾಪ್ರಭುತ್ವದ ರಾಷ್ಟ್ರ. ಬಿಜೆಪಿ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡುತ್ತಿದೆ. ಚುನಾಯಿತ ಸರ್ಕಾರಗಳನ್ನು ವಾಮಮಾರ್ಗಗಳ ಮ?ಲಕ ಕೆಳಗೆ ಇಳಿಸುತ್ತಿದೆ. ಆಪರೇಷನ್ ಕಮಲ ಎಂಬ ಕೆಟ್ಟ ಪದ್ದತಿಯನ್ನು ಮುಂದುವರಿಸುತ್ತಿದೆ. ಹೀಗಾಗಿ, ಕಾಂಗ್ರೆಸ್ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಸಲು ಹೋರಾಟ ನಡೆಸುತ್ತಿದೆ ಎಂದು ಡಿ.ಕೆ ಶಿವಕುಮಾರ್ ಆರೋಪಿಸಿದರು.
ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!
ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...








