Cong presidnet Election: ರಾಹುಲ್ ಮತದಾನದ ಬಗ್ಗೆ ಕಾಂಗ್ರೆಸ್ ವಿವರಣೆ…
ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಸೋಮವಾರ ಮತದಾನ ನಡೆಯಲಿದೆ. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.
ಪಕ್ಷದ ಅಧ್ಯಕ್ಷೀಯ ಚುನಾವಣೆಗಾಗಿ ಎಲ್ಲಾ ರಾಜ್ಯಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಭಾರತ್ ಜೋಡೋ ಯಾತ್ರೆಯಲ್ಲಿರುವ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದ ಬಳ್ಳಾರಿಯಲ್ಲಿ ಮತ ಹಾಕಲಿದ್ದಾರೆ ಎಂದು ಪಕ್ಷದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
”ರಾಹುಲ್ ಗಾಂಧಿ ಎಲ್ಲಿ ಮತ ಹಾಕುತ್ತಾರೆ ಎಂಬ ಪ್ರಶ್ನೆಗಳು ಕೇಳಿ ಬರುತ್ತಿವೆ. ಆದರೆ ಈ ವಿಚಾರದಲ್ಲಿ ಯಾವುದೇ ಊಹಾಪೋಹಗಳಿಗೆ ಅವಕಾಶವಿಲ್ಲ. ಸಂಗನಕಲ್ಲುನಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಭಾಗವಹಿಸುತ್ತಿದ್ದಾರೆ. ರಾಹುಲ್ ಮತ್ತು 40 ಪಿಸಿಸಿ ಪ್ರತಿನಿಧಿಗಳು ಬಳ್ಳಾರಿಯಲ್ಲಿ ಮತದಾನದ ಹಕ್ಕನ್ನು ಚಲಾಯಿಸಲಿದ್ದಾರೆ,” ಎಂದು ಜೈರಾಮ್ ರಮೇಶ್ ಆ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಪಕ್ಷದ ಕೇಂದ್ರ ಕಚೇರಿಯಲ್ಲಿ ಸೋನಿಯಾ ಮತ ಚಲಾಯಿಸಲಿದ್ದಾರೆ.
ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಮತ ಚಲಾಯಿಸಲಿದ್ದಾರೆ. ಈ ಬಾರಿಯ ಚುನಾವಣೆಗೆ ಎಲ್ಲಾ ರಾಜ್ಯಗಳಲ್ಲಿ ಒಟ್ಟು 67 ಬೂತ್‌ಗಳನ್ನು ಸಿದ್ಧಪಡಿಸಲಾಗಿದೆ ಎಂದು ಪಕ್ಷದ ಕೇಂದ್ರ ಚುನಾವಣಾ ಪ್ರಾಧಿಕಾರ (ಸಿಇಎ) ತಿಳಿಸಿದೆ.
Cong president election: Congress explanation about Rahul’s vote…