ಪೂರ್ವ ಕಾಂಗೋದಲ್ಲಿ ಜ್ವಾಲಾಮುಖಿ ಸ್ಫೋಟ – 32 ಕ್ಕೂ ಹೆಚ್ಚು ಸಾವು

1 min read

ಪೂರ್ವ ಕಾಂಗೋದಲ್ಲಿ ಜ್ವಾಲಾಮುಖಿ ಸ್ಫೋಟ – 32 ಕ್ಕೂ ಹೆಚ್ಚು ಸಾವು

ಪೂರ್ವ ಕಾಂಗೋದಲ್ಲಿ ಜ್ವಾಲಾಮುಖಿ ಸ್ಫೋಟ ಸಂಭವಿಸಿದ್ದು, ದುರಂತ ಪ್ರಕರಣದಲ್ಲಿ ಇಲ್ಲಿವರೆಗೂ 32 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಜ್ವಾಲಾಮುಖಿ ಸ್ಫೋಟದಿಂದ ಗೋಮಾ ಪ್ರದೇಶದ ಹೊರವಲಯದಲ್ಲಿ ಅನೇಕ ಮನೆಗಳು ಹಾನಿಗೊಳಗಾಗಿದೆ. ಇಲ್ಲಿಯವರೆಗೂ ಅನೇಕರು ನಾಪತ್ತೆಯಾಗಿದ್ದು ಶೋಧ ಕಾರ್ಯಾಚರಣೆ ಮುಮದುವರೆದಿದೆ.

ನೈರಗೊಂಗೊ ಪರ್ವತವು ಶನಿವಾರ ಕೆಂಪು ಬಣ್ಣಕ್ಕೆ ತಿರುಗಿತ್ತು. ನಂತರ ಜ್ವಾಲಾಮುಖಿ ಸ್ಫೋಟಗೊಂಡು ಇದರಲ್ಲಿನ ಲಾವಾರಸವು ಪರ್ವತದ ಬುಡದಲ್ಲಿರುವ ಅನೇಕ ಹಳ್ಳಿಗಳಿಗೆ ಹರಡಿತು. ಲಾವಾರಸದಿಂದಾಗಿ 500ಕ್ಕೂ ಹೆಚ್ಚುಮನೆಗಳು ನಾಶವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಾವಾರಸದಿಂದ ತಪ್ಪಿಸಿಕೊಳ್ಳುವಾಗ 12ಕ್ಕೂ ಹೆಚ್ಚು ಜನರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಹಲವರು ಮನೆಗಳಲ್ಲಿಯೇ ಸಾವನ್ನಪ್ಪಿದ್ದಾರೆ. ಕೆಲವರು ವಿಷಕಾರಿ ಅನಿಲ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಕಿವು ಪ್ರಾಂತ್ಯದ ನಾಗರಿಕ ಸಂರಕ್ಷಣಾ ವಿಭಾಗದ ಮುಖ್ಯಸ್ಥ ಜೋಸೆಫ್ ಮಕುಂಡಿ ಅವರು ಮಾಹಿತಿ ನೀಡಿದ್ದಾರೆ. 170 ಕ್ಕೂ ಹೆಚ್ಚು ಮಕ್ಕಳು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಕೊರೊನ ಮಹಾಮಾರಿ:

 ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

 ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

 ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

 ಜನ ನಿಬಿಡ ಪ್ರದೇಶದಿಂದ ದೂರವಿರಿ.

 ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

 ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

 ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

 ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

 ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd