ಬೆಂಗಳೂರು: ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಎರಡನೇ ಪಟ್ಟಿಯಲ್ಲಿ 17 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ. ಈ ಪಟ್ಟಿಯಲ್ಲಿ ಸಚಿವರ ಮಕ್ಕಳಿಗೆ ಹೆಚ್ಚಿನ ಮಣೆ ಹಾಕಲಾಗಿದೆ. ವೆಂಟಪ್ಪ ನಾಯಕ್ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ್ ಗೆ ಟಿಕೆಟ್ ನೀಡಿದೆ.
ಮೊದಲ ಪಟ್ಟಿಯಲ್ಲಿ 7 ಜನರಿಗೆ ಟಿಕೆಟ್ ಫೈನಲ್ ಆಗಿತ್ತು. ಸದ್ಯ 17 ಕ್ಷೇತ್ರಗಳಿಗೆ ನೀಡಲಾಗಿದೆ. ಈ ಮೂಲಕ ಒಟ್ಟು 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದಾಂಗಿದೆ. ಇನ್ನೂ ನಾಲ್ಕು ಕ್ಷೇತ್ರಗಳಿಗೆ ಫೈನಲ್ ಆಗಿಲ್ಲ.
• ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್
• ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ
• ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಎಂ.ವಿ.ರಾಜೀವ್ ಗೌಡ
• ಮೈಸೂರು ಲೋಕಸಭಾ ಕ್ಷೇತ್ರ-ಎಂ.ಲಕ್ಷ್ಮಣ್
• ಚಿತ್ರದುರ್ಗ ಲೋಕಸಭಾ ಕ್ಷೇತ್ರ-ಬಿ.ಎನ್.ಚಂದ್ರಪ್ಪ
• ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಪದ್ಮರಾಜ್
• ಉಡುಪಿ, ಚಿಕ್ಕಮಗಳೂರು ಕ್ಷೇತ್ರ-ಜಯಪ್ರಕಾಶ್ ಹೆಗ್ಡೆ
• ಕಲಬುರಗಿ ಲೋಕಸಭಾ ಕ್ಷೇತ್ರ-ರಾಧಾಕೃಷ್ಣ ದೊಡ್ಡಮನಿ
• ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ
• ಬೆಂಗಳೂರು ಸೆಂಟ್ರಲ್ ಕ್ಷೇತ್ರ-ಮನ್ಸೂರ್ ಅಲಿಖಾನ್
• ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್
• ಧಾರವಾಡ ಲೋಕಸಭಾ ಕ್ಷೇತ್ರ-ವಿನೋದ್ ಅಸೋಟಿ
• ಕೊಪ್ಪಳ ಲೋಕಸಭಾ ಕ್ಷೇತ್ರ-ರಾಜಶೇಖರ್ ಹಿಟ್ನಾಳ್
• ಬೀದರ್ ಲೋಕಸಭಾ ಕ್ಷೇತ್ರ-ಸಾಗರ್ ಖಂಡ್ರೆ
• ರಾಯಚೂರು ಲೋಕಸಭಾ ಕ್ಷೇತ್ರ-ಕುಮಾರ್ ಜಿ ನಾಯಕ್
• ಬೆಳಗಾವಿ ಲೋಕಸಭಾ ಕ್ಷೇತ್ರ-ಮೃಣಾಲ್ ಹೆಬ್ಬಾಳ್ಕರ್
• ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಪ್ರಿಯಾಂಕಾ ಜಾರಕಿಹೊಳಿ
ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆಗೆ ಬೀದರ್, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಗ ಮೃಣಾಲ್ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಗೆ ಚಿಕ್ಕೋಡಿ, ಸಚಿವ ರಾಮಲಿಂಗರೆಡ್ಡಿ ಪುತ್ರಿ ಸೌಮ್ಯಾರೆಡ್ಡಿಗೆ ಬೆಂಗಳೂರು ದಕ್ಷಿಣ ಟಿಕೆಟ್, ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಟಿಕೆಟ್ ಫೈನಲ್ ಮಾಡಲಾಗಿದೆ.
ಇನ್ನೂ ನಾಲ್ಕು ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಆಗಿಲ್ಲ.
ಚಿಕ್ಕಬಳ್ಳಾಪುರ – ರಕ್ಷಾ ರಾಮಯ್ಯ – ಶಿವಶಂಕರ್ ರೆಡ್ಡಿ, ವೀರಪ್ಪ ಮೊಯ್ಲಿ
• ಕೋಲಾರ – ಚಿಕ್ಕಪೆದ್ದಣ್ಣ, ಎಲ್.ಹನುಮಂತಯ್ಯ
• ಚಾಮರಾಜನಗರ – ಸುನೀಲ್ ಬೋಸ್, ದರ್ಶನ್ ಧ್ರುವ ನಾರಾಯಣ
• ಬಳ್ಳಾರಿ – ಸೌಪರ್ಣಿಕಾ ತುಕಾರಾಂ, ವೆಂಕಟೇಶ್ ಪ್ರಸಾದ್, ವಿ.ಎಸ್. ಉಗ್ರಪ್ಪ, ತುಕಾರಾಂ ಇನ್ನೂ ಖಚಿತವಾಗಿಲ್ಲ.