ನವದೆಹಲಿ: ಕಾಂಗ್ರೆಸ್ ನ ನಾಲ್ಕನೇ ಪಟ್ಟಿ ಬಿಡುಗಡೆಯಾಗಿದ್ದು, ಪ್ರಧಾನಿ ಮೋದಿ ವಿರುದ್ಧ ಅಜಯ್ ರೈ ಸ್ಪರ್ಧಿ ಮಾಡುತ್ತಿದ್ದಾರೆ.
ಉತ್ತರಪ್ರದೇಶ, ಮಹಾರಾಷ್ಟ್ರ ಸೇರಿದಂತೆ 13 ರಾಜ್ಯಗಳ 46 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ವಾರಣಾಸಿ ಅಭ್ಯರ್ಥಿಯನ್ನು ಕೂಡ ಕಾಂಗ್ರೆಸ್ ಘೋಷಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅಜಯ್ ರೈ ಸ್ಪರ್ಧಿಸಲಿದ್ದಾರೆ. ಉತ್ತರಪ್ರದೇಶ, ಮಹಾರಾಷ್ಟ್ರ, ಛತ್ತೀಸ್ಗಢ, ತಮಿಳುನಾಡು, ಮಧ್ಯಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಮಣಿಪುರ, ಜಮ್ಮು-ಕಾಶ್ಮೀರ, ಅಸ್ಸಾಂ, ಅಂಡಮಾನ್-ನಿಕೋಬಾರ್, ಮಿಜೋರಾಂನ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.
ಕಾಂಗ್ರೆಸ್ ನ ಹಿರಿಯ ನಾಯಕ ಮಧ್ಯಪ್ರದೇಶದ ರಾಜ್ ಗಡ್ ನಿಂದ ಕಣಕ್ಕೆ ಇಳಿಯಲಿದ್ದಾರೆ. ಕರ್ನಾಟಕದಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಶಶಿಕಾಂತ್ ಸೇಂಥಿಲ್ ಕೂಡ ಈ ಬಾರಿ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ತಮಿಳುನಾಡಿನ ತಿರುವಳ್ಳೂರು ಕ್ಷೇತ್ರದಿಂದ ಸ್ಪರ್ಧೆಗೆ ಮುಂದಾಗಿದ್ದಾರೆ.