ಬೈಕ್ ಜಾಥಾ ಮೂಲಕ ಮೇಕೆದಾಟು ಕಡೆಗೆ ಹೊರಟ ಕಾಂಗ್ರೆಸಿಗರು Saaksha Tv
ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆಗೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಹಾಗೇ ಜಿಲ್ಲೆಯ ಮಳವಳ್ಳಿಯಲ್ಲಿ ಕಾಂಗ್ರೆಸ್ ನ ಮಾಜಿ ಸಚಿವ ನರೇಂದ್ರ ಸ್ವಾಮಿಯವರ ನೇತೃತ್ವದಲ್ಲಿ ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಬಳಿ ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಲಾಯಿತು.
ಈ ಪಾದಯಾತ್ರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಾಗಿಯಾಗಿದ್ದು, ಬೈಕ್ ಜಾಥಾ ಮೂಲಕ ಮೇಕೆದಾಟು ಕಡೆಗೆ ಹೊರಟಿದ್ದಾರೆ. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ, ಸೇರಿದಂತೆ ಹಲವರು ಭಾಗಿಯಾಗಿದ್ದರು.







