ಪೊಲೀಸರು ಹೊಡೆಯುವ ನಕಲಿ ವಿಡಿಯೋ ಹರಿಬಿಟ್ಟ ಕಾಂಗ್ರೆಸ್ ಕಾರ್ಯಕರ್ತೆ ಪದ್ಮಾ ಹರೀಶ್ ಬಂಧನ
ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮೇ 10ರಿಂದ ಕಟ್ಟುನಿಟ್ಟಿನ ಲಾಕ್ಡೌನ್ ವಿಧಿಸಿದೆ. ಲಾಕ್ಡೌನ್ ನ ಮೊದಲ ದಿನ ಟಫ್ ರೂಲ್ಸ್ ಜಾರಿ ಮಾಡಿದ ಪೋಲಿಸರು ಅನಗತ್ಯವಾಗಿ ರಸ್ತೆಗಿಳಿದವರ ಮೇಲೆ ಲಾಠಿ ಪ್ರಯೋಗಿಸಿದ್ದರು. ಇದಕ್ಕೆ ಅನೇಕರು ವಿರೋಧ ವ್ಯಕ್ತಪಡಿಸಿದರು ಮತ್ತು ಹೈಕೋರ್ಟ್ ಸಹ ಜನರಿಗೆ ಲಾಠಿ ಪ್ರಯೋಗಿಸದಂತೆ ತಿಳಿಸಿತು. ಬಳಿಕ ಪೊಲೀಸ್ ಕಮಿಷನರ್ ಕೂಡ ಜನರ ಮೇಲೆ ಲಾಠಿ ಪ್ರಯೋಗಿಸದಂತೆ ತಮ್ಮ ಸಿಬ್ಬಂದಿಗೆ ಆದೇಶಿಸಿದ್ದರು.
ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪೊಲೀಸರೆಲ್ಲಾ ಸುತ್ತುವರಿದು ಒಬ್ಬ ವ್ಯಕ್ತಿಗೆ ಹೊಡೆಯುವ ನಕಲಿ ವಿಡಿಯೋ ವೈರಲ್ ಆಯಿತು. ಈ ದೃಶ್ಯ ಕರ್ನಾಟಕದಲ್ಲಿ ಸಂಭವಿಸಿರುವುದು ಮತ್ತು ಕರ್ನಾಟಕ ರಾಜ್ಯ ಪೊಲೀಸರು ದರ್ಪ ತೋರಿದ್ದಾರೆ ಎಂದು ಮಹಿಳೆಯೊಬ್ಬರು ಆ ವಿಡಿಯೋವನ್ನು ಪೋಸ್ಟ್ ಮಾಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ಆ ವಿಡಿಯೋದಿಂದ ಪೊಲೀಸರ ಮೇಲೆ ಜನ ಆಕ್ರೋಶ ವ್ಯಕ್ತಪಡಿಸಿದರು.

ಈ ವಿಡಿಯೋವನ್ನು ಗಮನಿಸಿದ ರಾಜ್ಯ ಪೊಲೀಸರು ಇದು ಕರ್ನಾಟಕದಲ್ಲಿ ನಡೆದಿರುವ ಘಟನೆ ಅಲ್ಲ. ಏಪ್ರಿಲ್ 3ರಂದು ಮಹಾರಾಷ್ಟ್ರದಲ್ಲಿ ನಡೆದಿರುವ ಘಟನೆ ಎಂದು ಸ್ಪಷ್ಟನೆ ನೀಡಿದರು. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಅವರು ಇದು ರಾಜ್ಯದಲ್ಲಿ ನಡೆದಿರುವ ಘಟನೆ ಅಲ್ಲ. ಏಪ್ರಿಲ್ 3ರಂದು ಮುಂಬೈನಲ್ಲಿ ನಡೆದಿರುವ ಘಟನೆ. ಈ ನಕಲಿ ವಿಡಿಯೋ ಶೇರ್ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಸತ್ಯಾಸತ್ಯತೆ ತಿಳಿಯದೇ ಪ್ರಚೋದಾತ್ಮಕ ಸಂದೇಶಗಳನ್ನು ಪೋಸ್ಟ್ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಟ್ವಿಟರ್ ಮುಖಾಂತರ ಎಚ್ಚರಿಕೆ ನೀಡಿದ್ದರು.
https://twitter.com/CPBlr/status/1392145241545662464?s=19
ನಕಲಿ ವಿಡಿಯೋ ಪೋಸ್ಟ್ ಮಾಡಿದ ಮಹಿಳೆಯ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ಬಂದ ಹಿನ್ನೆಲೆಯಲ್ಲಿ ದಕ್ಷಿಣ ವಿಭಾಗದ ಸಿಇಎನ್ ಠಾಣೆ ಪೊಲೀಸರು ವಿಡಿಯೋ ಹರಿಬಿಟ್ಟ ಮಹಿಳೆಯನ್ನು ಪತ್ತೆ ಮಾಡಿದ್ದಾರೆ. ಆಕೆ ಕಾಂಗ್ರೆಸ್ ಕಾರ್ಯಕರ್ತೆ ಪದ್ಮಾ ಹರೀಶ್ ಎಂಬುವುದು ವಿಚಾರಣೆ ಸಂದರ್ಭ ತಿಳಿದು ಬಂದಿದೆ.

ಹಳೇ ವಿಡಿಯೋಗೆ ಧ್ವನಿ ನೀಡಿ ವಿಡಿಯೋ ಪೋಸ್ಟ್ ಮಾಡಿರುವ ಬಗ್ಗೆ ತನಿಖೆ ವೇಳೆ ಆರೋಪಿ ಪದ್ಮಾ ಹರೀಶ್ ತಪ್ಪೊಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಪದ್ಮಾ ಹರೀಶ್ರನ್ನು ಬಂಧಿಸಲಾಗಿದೆ. ಪದ್ಮಾ ಹರೀಶ್ ಬಂಧನದ ಬಗ್ಗೆ ರಾಜ್ಯ ಕಾಂಗ್ರೆಸ್ ನಿಂದ ಇಲ್ಲಿಯವರೆಗೆ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.
ಕೊರೋನಾ ಸಂಕಷ್ಟ ಸಮಯದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಿ ಪೊಲೀಸರು ಕೊರೋನಾ ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ. ಇಂತಹ ಕಠಿಣ ಸಮಯದಲ್ಲೂ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಬಿಡುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಈ ಮೂಲಕ ಸ್ಪಷ್ಟ ಸಂದೇಶ ನೀಡಿದ್ದಾರೆ.

ಎಚ್ಚರಿಕೆ – ದೇಶಾದ್ಯಂತ ಕೊರೋನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ನಮ್ಮ ಮತ್ತು ನಮ್ಮ ಕುಟುಂಬದ ಆರೋಗ್ಯ ನಮ್ಮ ಕೈಯಲ್ಲಿದೆ. ಇದು ಸಾಕ್ಷಾಟಿವಿ ಕಳಕಳಿ
https://twitter.com/SaakshaTv/status/1392306768076853250?s=19
https://twitter.com/SaakshaTv/status/1390529726419177479?s=19
https://twitter.com/SaakshaTv/status/1391245034570268673?s=19
ಪೋಟ್ಯಾಟೋ( ಆಲೂಗಡ್ಡೆ) ಲಾಲಿಪಾಪ್#Saakshatv #cookingrecipe #potato #lollipop https://t.co/8Xd6Perkqe
— Saaksha TV (@SaakshaTv) May 7, 2021
https://twitter.com/SaakshaTv/status/1390494846192922625?s=19
#Congress #PadmaHarish #fakevideo








