ಹನೂರು ಪಟ್ಟಣ ಪಂಚಾಯಿತಿ : ಅಧಿಕಾರಕ್ಕಾಗಿ ಕಾಂಗ್ರೆಸ್-ಬಿಜೆಪಿ ಮೈತ್ರಿ
ಚಾಮರಾಜನಗರ : ರಾಜ್ಯದಲ್ಲಿ ಕಾಂಗ್ರೆಸ್ – ಬಿಜೆಪಿ ನಡುವೆ ಕಿತ್ತಾಟ ನಡೆಯುತ್ತಲೇ ಇರುತ್ತದೆ. ರಾಜಕೀಯವಾಗಿ ಬದ್ಧವೈರಿಗಳಾಗಿರುವ ಈ ಪಕ್ಷಗಳು ಒಂದಾಗಿ ಅಧಿಕಾರ ಹಿಡಿಯುವುದು ಅಂದ್ರೆ ಅದು ಎಂಟನೇ ಅದ್ಭುತ. ಆದ್ರೆ ಹನೂರು ಪಟ್ಟಣ ಪಂಚಾಯಿತಿಯಲ್ಲಿ ಈ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ.
ಹೌದು..! ಹನೂರು ಪಟ್ಟಣ ಪಂಚಾಯಿತಿಗೆ ಶನಿವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿವೆ.
13 ಸದಸ್ಯ ಬಲದ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಯ ಚಂದ್ರಮ್ಮ ಅಧ್ಯಕ್ಷೆಯಾಗಿ ಹಾಗೂ ಕಾಂಗ್ರೆಸ್ ಪಕ್ಷದ ಹರೀಶ್ ಕುಮಾರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಶಾಸಕ ನರೇಂದ್ರ ಅವರು ಬಿಜೆಪಿಗೆ ಬೆಂಬಲ ನೀಡಿದ್ರೆ, ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದಾರೆ.
ಕನ್ನಡದ ಕೆಲಸಕ್ಕಾಗಿ, ಏಳಿಗೆಗಾಗಿ ನಮ್ಮ ಸರ್ಕಾರ ಬದ್ಧ : ಬಿಎಸ್ ವೈ
ಇನ್ನು ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ವಿ.ಶ್ರೀನಿವಾಸ ಪ್ರಸಾದ್, ಈ ಮೈತ್ರಿ ಅನಿವಾರ್ಯವಾಗಿತ್ತು. ಹೀಗಾಗಿ ಮೈತ್ರಿ ಮಾಡಿದ್ದೇವೆ.
ಹಿಂದೆ ಕೇಂದ್ರದಲ್ಲಿ ಎನ್ ಡಿಎ ಸರ್ಕಾರಕ್ಕೆ ಫಾರೂಕ್ ಅಬ್ದುಲ್ಲಾ ಅವರಂತಹವರೇ ಬೆಂಬಲ ನೀಡಿದ್ದರು. ಕರುಣಾನಿಧಿ, ಮಮತಾ ಬ್ಯಾನರ್ಜಿ, ಜಾರ್ಜ್ ಫನಾರ್ಂಡೀಸ್ ಕೈ ಜೋಡಿಸಿದ್ದರು.
ಆಯಾ ಸಮಯ, ಸಂದರ್ಭಕ್ಕೆ ತಕ್ಕಂತೆ ಮೈತ್ರಿ ಆಗುತ್ತವೆ. ಸ್ಥಳೀಯವಾಗಿ ಮೈತ್ರಿ ಅನುವಾರ್ಯವಾಗಿತ್ತು. ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್ ಮತ್ತು ಬಿಜೆಪಿ ಮೈತ್ರಿ ಆಗಿದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಸರಿಯಲ್ಲ ಎಂದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel