ಟ್ವಿಟ್ಟರ್ ನಲ್ಲಿ ಕಾಂಗ್ರೆಸ್-ಬಿಜೆಪಿ ಕಿತ್ತಾಟ
ಬೆಂಗಳೂರು : ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ – ಬಿಜೆಪಿ ನಡುವಿನ ಕಿತ್ತಾಟ ಜೋರಾಗಿದೆ. ಬಸನಗೌಡ ಪಾಟೀಲ್ ಯತ್ನಾಳ್ ವಿಚಾರ ತೆಗೆದು ಬಿಜೆಪಿಯನ್ನ ಕಾಂಗ್ರೆಸ್ ಕುಟುಕಿದ್ರೆ, ಸಿದ್ದರಾಮಯ್ಯ ಡಿಕೆಶಿ ಮುಸುಕಿನ ಗುದ್ದಾಟದ ಬಗ್ಗೆ ಟ್ವೀಟ್ ಮಾಡಿ ಬಿಜೆಪಿ, ಕಾಂಗ್ರೆಸ್ ಕಾಳೆಲೆದಿದೆ.
ಜೆಡಿಎಸ್ ಬಿತ್ತಿದ ಬೀಜ ಕರ್ನಾಟಕ ಕಾಂಗ್ರೆಸ್ನಲ್ಲಿ ಬೆಳೆಯುತ್ತಿದೆ. ಇದು ಬೆಳೆ ಅಲ್ಲ, ಕಳೆ ಎಂದು ಡಿಕೆ ಶಿವಕುಮಾರ್ ಅವರಿಗೆ ಈಗ ಅರಿವಾಗುತ್ತಿದೆ. ಈ ಕಳೆ ಎಂಬ ಸಿದ್ದರಾಮಯ್ಯ ಅವರನ್ನು ಬೇರು ಸಮೇತ ಕಿತ್ತು ಹಾಕಲು ಮೂಲ ಕಾಂಗ್ರೆಸ್ಸಿಗರು ಪಣ ತೊಟ್ಟಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಇದಕ್ಕೆ ಪ್ರತಿಯಾಗಿ ಬಿಜೆಪಿ ನಡೆಸುತ್ತಿರುವ ಬಿಎಸ್ವೈಮುಕ್ತ ಬಿಜೆಪಿ ಅಭಿಯಾನದ ಮುಖವಾಣಿ ಬಸನಗೌಡ ಪಾಟೀಲ್ ಯತ್ನಾಳ್. ನಳಿನ್ ಕುಮಾರ್ ಕಟೀಲ್ ಅವರು ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳದೆ ಮಜಾ ಅನುಭವಿಸುತ್ತ ನೋಡಿಕೊಂಡಿರುವುದೇ ಇದಕ್ಕೆ ಸಾಕ್ಷಿ. ಬಿಜೆಪಿ ಕರ್ನಾಟಕ ಕೇವಲ ಒಡೆದ ಮನೆಯಲ್ಲ, ಛಿದ್ರಗೊಂಡು ಜೋಡಿಸಲಾಗದ ಮಡಿಕೆ. ಇವರ ಸಿಡಿ ಸರ್ಕಾರದ ಕಿತ್ತಾಟದಲ್ಲಿ ರಾಜ್ಯ ಅನಾಥವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಇದಕ್ಕೆ ಉತ್ತರವಾಗಿ ಬಿಜೆಪಿ, ವಲಸೆ ನಾಯಕ ಸಿದ್ದರಾಮಯ್ಯ ಅವರು ಸಂತ್ರಸ್ತ ಶಾಸಕ ಅಖಂಡ ಪರವಾಗಿ ನಿಂತರೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗಲಭೆಯ ಆರೋಪಿ ಸಂಪತ್ ರಾಜ್ ಪರವಾಗಿ ನಿಂತರು. ಇವರಿಬ್ಬರ ನಡುವಿನ ಸಂಘರ್ಷದಿಂದ ದಲಿತ ಶಾಸಕನಿಗೆ ಅನ್ಯಾಯವಾಗಿದೆ. ಕರ್ನಾಟಕ ಕಾಂಗ್ರೆಸ್ ಗಲಭೆಯ ಆರೋಪಿಗೆ ಬಹಿರಂಗ ಬೆಂಬಲ ನೀಡಿದೆ ಎಂದು ಟ್ವೀಟ್ ಮಾಡಿದೆ.