ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ, ಕಾಂಗ್ರೆಸ್-ಬಿಜೆಪಿ ( Congress-BJP ) ಸರ್ಕಾರ : ಡಿಕೆಶಿ
ಬೆಂಗಳೂರು : ಪ್ರಸ್ತುತ ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ, ಬದಲಿಗೆ ಕಾಂಗ್ರೆಸ್ ಬಿಜೆಪಿ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ..
ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ‘ಮುನಿರತ್ನ ಅವರ ಇಂಧನ ಖಾತೆ’ ಹೇಳಿಕೆಗೆ ಪ್ರತಿಕ್ರಿಯಿಸಿ, ಮುನಿರತ್ನ ಗೆದ್ದರೆ ಕೇವಲ ಇಂಧನ ಖಾತೆ ಯಾಕೆ, ಮುಖ್ಯಮಂತ್ರಿ ಸ್ಥಾನವನ್ನೇ ಪಡೆಯಲಿ’.
ಪ್ರಸ್ತುತ ಅಧಿಕಾರದಲ್ಲಿರುವುದು ಬಿಜೆಪಿ ಸರಕಾರವಲ್ಲ, ಕಾಂಗ್ರೆಸ್-ಬಿಜೆಪಿ ಸರಕಾರ ಎಂದು ತಿರುಗೇಟು ನೀಡಿದರು.
ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಡ್ರಾಮಾ ಹಾಗೂ ಸಿನಿಮಾ ಮಾಡುತ್ತಾರೆ. ಆದರೆ, ನಾವು ಮಾಡಲ್ಲ.
ಹೀಗಾಗಿ ನಮ್ಮದು ಒಂದೇ ಟೇಕ್, ನಮ್ಮಲ್ಲಿ ಯಾವುದೇ ರೀತಿಯ ಕಟ್ ಆಂಡ್ ಪೇಸ್ಟ್ ಇಲ್ಲ. ಇದೇ ನಮಗೂ ಮುನಿರತ್ನಗೂ ಇರುವ ವ್ಯತ್ಯಾಸ ಎಂದು ಡಿ.ಕೆ.ಶಿವಕುಮಾರ್, ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದರು.
ಆರ್ ಆರ್ ನಗರದಲ್ಲಿ ಮತದಾನ ಪ್ರಮಾಣ ಕಡಿಮೆ ಆಗಿರುವ ಬಗ್ಗೆ ಮಾತನಾಡಿದ ಡಿಕೆಶಿ, ಕ್ಷೇತ್ರದಲ್ಲಿ ಸುಶಿಕ್ಷಿತ ಮತದಾರರು ರಾಜ್ಯದಲ್ಲಿನ ಪರಿಸ್ಥಿತಿ ನೋಡಿ ಮತ ಹಾಕಲು ಹಿಂಜರಿದಿದ್ದಾರೆ.
ಗೆಲುವಿಗೂ ಮುನ್ನವೇ `ಪವರ್ ಖಾತೆ ಮೇಲೆ ಮುನಿರತ್ನ ಕಣ್ಣು’
ರಾಜ್ಯ ಹಾಗೂ ಕೇಂದ್ರ ಸರಕಾರಗಳ ಕಾರ್ಯ ವೈಖರಿಗೆ ಬೇಸತ್ತು ಹೆಚ್ಚಿನ ಸಂಖ್ಯೆಯಲ್ಲಿ ಮತದಾರ ಮತದಾನ ಮಾಡಿಲ್ಲ.
ಜನರ ಸಂಕಷ್ಟಕ್ಕೆ ಸ್ಪಂದಿಸದಿರುವುದು, ಜನಪರವಾದ ಕೆಲಸ ಮಾಡದೇ ಇರುವುದು ಹಾಗೂ ಪ್ರಸಕ್ತ ರಾಜಕೀಯ ವಿದ್ಯಮಾನಗಳಿಂದ ಬೇಸತ್ತು ಹೆಚ್ಚಿನ ಮತದಾರ ಮತ ಹಾಕಲು ಬಂದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಶಿರಾ ಹಾಗೂ ಆರ್.ಆರ್.ನಗರ ಕ್ಷೇತ್ರಗಳ ಮತದಾರರ ಮೇಲೆ ವಿಶ್ವಾಸ ಇದೆ.
ಹೀಗಾಗಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಶಿವಕುಮಾರ್, ಎರಡೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಜೊತೆಗೆ ಬೇರೆ ಪಕ್ಷಗಳ ಕಾರ್ಯಕರ್ತರೂ ಸಹಾಯ ಮಾಡಿದ್ದಾರೆ.
ಆದರೆ, ಅವರು ಯಾರು ಎಂದು ಹೇಳುವುದಿಲ್ಲ. ಅವರು ಸೇರಿದಂತೆ ನಮ್ಮ ಪಕ್ಷದ ಎಲ್ಲ ಹಿರಿಯ-ಕಿರಿಯ ಮುಖಂಡರು ಹಾಗೂ ಎಲ್ಲ ಕಾರ್ಯಕರ್ತರಿಗೆ ಪಕ್ಷದ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದರು.
ಅರ್ನಬ್ ಬಂಧನ ಖಂಡಿಸಿದ ಬಿಜೆಪಿಗರಿಗೆ ದಿನೇಶ್ ಗುಂಡೂರಾವ್ ತಿರುಗೇಟು
ಚುನಾವಣಾ ಆಯೋಗ ನಾವು ಕೊಟ್ಟ ಮಾಹಿತಿಗೆ ಪೂರ್ಣ ಪ್ರಮಾಣದಲ್ಲಿ ಅಲ್ಲದಿದ್ದರೂ ತಕ್ಕಮಟ್ಟಿಗೆ ಕಾರ್ಯಪ್ರವೃತ್ತವಾಗಿದೆ.
ಪೊಲೀಸರ ದುರಾಡಳಿತ, ಅಧಿಕಾರಿಗಳ ದುರ್ಬಳಕೆ, ಅಕ್ರಮ ವಿಚಾರವಾಗಿ ನಾವು ಕೊಟ್ಟ ದೂರಿನ ಸತ್ಯಾಸತ್ಯತೆ ಪರಿಶೀಲಿಸಿದ್ದಾರೆ.
ಅದರ ಪರಿಣಾಮ ಏನಾಯಿತು ಎಂಬುದು ಗೊತ್ತಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel