Congress | ಬಿಜೆಪಿ ಎಂದರೆ ಕಳ್ಳ, ಮಳ್ಳ, ಸುಳ್ಳರ ಪಕ್ಷ
ಬೆಂಗಳೂರು : ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು “ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ” ಎಂದು ಹೇಳಿಕೆ ನೀಡಿದ್ದಾರೆ.
ಇದಕ್ಕೆ ರಾಜ್ಯ ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದ್ದು, ಬಿಜೆಪಿ ಎಂದರೆ ಕಳ್ಳ, ಮಳ್ಳ, ಸುಳ್ಳರ ಪಕ್ಷ ಎನ್ನಲು ಇದಕ್ಕಿಂತ ಬೇರೆ ಸಾಕ್ಷಿ ಬೇಕೇ?
ಯತ್ನಾಳ್ ಬಿಜೆಪಿ ಪಕ್ಷದ ನಾಯಕರಲ್ಲ ಎಂದಿರುವ ಅರುಣ್ ಸಿಂಗ್ ಅವರ ಹೇಳಿಕೆಯನ್ನು ಬಿಜೆಪಿ ಅನುಮೋದಿಸುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.
ಅಲ್ಲದೆ ಇನ್ನೂ ಏಕೆ ಪಕ್ಷದಿಂದ ಯತ್ನಾಳರನ್ನು ಉಚ್ಛಾಟಿಸಿಲ್ಲ? ಇದೇ ಹೇಳಿಕೆಯನ್ನು ಬಸವರಾಜ ಬೊಮ್ಮಾಯಿ ಅವರೂ ಹೇಳುವರೇ ಎಂದು ರಾಜ್ಯ ಕಾಂಗ್ರೆಸ್ ಪಕ್ಷ ಪ್ರಶ್ನಿಸಿದೆ.

ಬಸನಗೌಡ ಪಾಟೀಲ್ ಯತ್ನಾಳ್ ಅವರು ಪದೇ ಪದೇ ಪಕ್ಷಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ.
ಅದರಲ್ಲೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ಸರಣಿ ಆರೋಪಗಳನ್ನು ಮಾಡುತ್ತಲೇ ಇರುತ್ತಾರೆ.
ಈ ಬಗ್ಗೆ ಸುದ್ದಿಗಾರರು ಅರುಣ್ ಸಿಂಗ್ ಅವರಿಗೆ ಪ್ರಶ್ನೆಗಳನ್ನು ಗೈದಿದ್ದು, ಇದಕ್ಕೆ ಅವರು “ ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.