ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು ಮಾಡಲಗಿದೆ.
ಚಿಕಿತ್ಸೆ ಪಡೆಯುತ್ತಿರುವ ಸೋನಿಯಾಗಾಂಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಗಂಗಾರಾಮ್ ಆಸ್ಪತ್ರೆ ವೈದ್ಯ ಡಿ.ಎಸ್ ರಾಣಾ ತಿಳಿಸಿದ್ದಾರೆ.
ಸಂಜೆ 7 ಗಂಟೆಗೆ ಸೋನಿಯಾ ಗಾಂಧಿ ಅಸ್ವಸ್ಥರಾದರು. ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕೆಲ ಮೂಲಗಳ ಪ್ರಕಾರ ನಿಯಮಿತ ತಪಾಸಣೆಗಾಗಿ ಸೋನಿಯಾಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಸೋನಿಯಾಗಾಂಧಿ ಅವರಿಗೆ ಕೆಲ ಪರೀಕ್ಷೆಗಳನ್ನು ನಡೆಸಬೇಕಿದೆ. ಹೀಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಕೆಲ ಸುದ್ದಿಸಂಸ್ಥೆಗಳು ವರದಿ ಮಾಡಿವೆ.
ಕಳೆದ ಫೆಬ್ರವರಿಯಲ್ಲಿಯೂ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಗ ಗಂಗಾರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೀಗಾಗಿ ಇಂದೂ ಕೂಡ ಗಂಗಾರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಧುದಕ್ಷಿಣೆ ಪಡೆದು ವಧು ಕೊಡದೆ ಮೋಸ
ಆನೇಕಲ್: ವಧುದಕ್ಷಿಣೆ ಪಡೆದು ವಧು ನೀಡದೆ ವರನಿಗೆ ವಂಚಿಸಿರುವ ಆರೋಪವೊಂದು ಆನೇಕಲ್ (Anekal) ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ವರನ ಕುಟುಂಬಸ್ಥರು ಯುವತಿ ಹಾಗೂ ಕುಟುಂಬಸ್ಥರ...