Congress | ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಭ್ರಷ್ಟಾಚಾರದ ರಾಜ್ಯ ಎಂಬ ಹಣೆಪಟ್ಟಿ
ಬೆಂಗಳೂರು : ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಇದ್ದ ಪ್ರಜ್ಞಾವಂತರ ನಾಡು, ಪ್ರಗತಿಪರ ರಾಜ್ಯ ಎಂಬ ಹೆಗ್ಗಳಿಕೆ ಕಳೆದು ಭ್ರಷ್ಟಾಚಾರದ ರಾಜ್ಯ ಎಂಬ ಹಣೆಪಟ್ಟಿ ಬಂದಿದ್ದು ದುರದೃಷ್ಟಕರ ಎಂದು ರಾಜ್ಯ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ.
ತೆಲಂಗಾಣದ ಹೈದರಾಬಾದಿನಲ್ಲಿ ವಿಮೋಚನಾ ದಿನಾಚರಣೆನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ 40% ಸಿಎಂ ಅವರಿಗೆ ಸ್ವಾಗತ ಎಂಬ ಬೃಹತ್ ಬೋರ್ಡ್ ಹಾಕುವ ಮೂಲಕ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಪರೋಕ್ಷವಾಗಿ ಅವಮಾನಿಸಲಾಗಿದೆ ಎಂದು ಮಾತುಗಳು ಕೇಳಿಬರುತ್ತಿವೆ.
![congress-cm-basavaraj-bommai](http://saakshatv.com/wp-content/uploads/2022/09/cms.jpg)
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, #40PercentSarkara ದ ಕುಖ್ಯಾತಿ ದೇಶದೆಲ್ಲೆಡೆ ಪಸರಿಸಿದೆ!
ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಇದ್ದ ಪ್ರಜ್ಞಾವಂತರ ನಾಡು, ಪ್ರಗತಿಪರ ರಾಜ್ಯ ಎಂಬ ಹೆಗ್ಗಳಿಕೆ ಕಳೆದು ಭ್ರಷ್ಟಾಚಾರದ ರಾಜ್ಯ ಎಂಬ ಹಣೆಪಟ್ಟಿ ಬಂದಿದ್ದು ದುರದೃಷ್ಟಕರ.
ಭ್ರಷ್ಟಾಚಾರದ ಮಹಾಪೋಷಕರಾದ ಸಿಎಂಗೆ ತೆಲಂಗಾಣದಲ್ಲಿನ ಈ ಬೋರ್ಡ್ಗಳನ್ನು ವಿರೋಧಿಸುವ ದಮ್ ಇಲ್ಲದಾಗಿದೆ ಎಂದು ವ್ಯಂಗ್ಯವಾಡಿದೆ.