ಕಾಂಗ್ರೆಸ್ ಕಾಮಿಡಿಯನ್ ಸಿದ್ದರಾಮಯ್ಯ : ಬಿಜೆಪಿ ಟ್ವೀಟ್
ಬೆಂಗಳೂರು : ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸುತ್ತಿದ್ದಂತೆ ರಾಜ್ಯ ಬಿಜೆಪಿ ಟ್ವಿಟ್ಟರ್ ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾಲೆಳೆದಿದೆ.
ರಾಜರಾಜೇಶ್ವರಿ ನಗರದಲ್ಲಿ ಪ್ರಚಾರ ಮಾಡುವಾಗ ಸಿದ್ದರಾಮಯ್ಯ ಆರ್ ಆರ್ ನಗರದಲ್ಲಿ ಬಿಜೆಪಿ ಅಲೆಯೇ ಇಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿರುವ ಬಿಜೆಪಿ, ಕಾಂಗ್ರೆಸ್ ಕಾಮಿಡಿಯನ್ ಸಿದ್ದರಾಮಯ್ಯ ಎಂದು ಟೀಕೆ ಮಾಡಿದೆ.
ಬಿಜೆಪಿ ಟ್ವೀಟ್ ನಲ್ಲಿ
ಸಿದ್ದರಾಮಯ್ಯ: ರಾಜರಾಜೇಶ್ವರಿನಗರದಲ್ಲಿ ಬಿಜೆಪಿಯ ಅಲೆಯೇ ಇಲ್ಲ
ಮತದಾರ: ಅಯ್ಯೋ ಸಿದ್ದರಾಮಯ್ಯನವರೇ ಇಲ್ಲಿ ನಿಮ್ಮ ಕಾಂಗ್ರೆಸ್ ಪಕ್ಷವೇ ಇಲ್ಲವಲ್ಲ ಎಂದು ಬಿಜೆಪಿ ಕಿಚಾಯಿಸಿದೆ
`ಶಿರಾ’ ಕೋಟೆಯಲ್ಲಿ ಖಾತೆ ತೆರೆದು ಇತಿಹಾಸ ಬರೆದ `ಕಮಲ’; ರಾಜೇಶ್‍ಗೌಡ ಭರ್ಜರಿ ಗೆಲುವು
ಜೊತೆಗೆ ಕಾಂಗ್ರೆಸ್ ಕಾಮಿಡಿಯನ್ ಸಿದ್ದರಾಮಯ್ಯ ಎಂದು ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.
ಇನ್ನು ರಾಜರಾಜೇಶ್ವರಿ ನಗರ ಮತ ಎಣಿಕೆ ಮುಕ್ತಾಯವಾಗಿದ್ದು, ಮುನಿರತ್ನ ಅವರು 57,936 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಮುನಿರತ್ನ 1,25,734 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ 67,798 ಮತಗಳನ್ನು ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ಕೇಶವಮೂರ್ತಿ 10,251 ಮತಗಳನ್ನು ಪಡೆದಿದ್ದಾರೆ.
ಇತ್ತ ಶಿರಾದಲ್ಲಿ ಬಿಜೆಪಿ ಚರಿತ್ರೆ ಸೃಷ್ಟಿ ಮಾಡಿದ್ದು, ಬಿಜೆಪಿಯಿಂದ ಸ್ಪರ್ಧಿಸಿದ್ದ ರಾಜೇಶ್ ಗೌಡ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಮತ್ತೆ ಸೋಲುಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel