ಮಂಡ್ಯ: ಕಾಂಗ್ರೆಸ್ ಮಾಡುತ್ತಿರುವ ಸಮಾವೇಶದ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ (Gandhiji) ಹೆಸರಿನಲ್ಲಿ ಕಾರ್ಯಕ್ರಮ ಮಾಡುತ್ತಿದೆ. ಕಟೌಟ್‌ಗಳಲ್ಲಿ ಗಾಂಧೀಜಿ ಫೋಟೋನೇ ನೋಡಲಿಲ್ಲ. ನಕಲಿ ಗಾಂಧಿಗಳ ಫೋಟೋ ಆಕಾಶದೆತ್ತರಕ್ಕೆ ಹಾಕಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಸರ್ಕಾರ ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಗಾಂಧಿ ಹೆಸರಲ್ಲಿ ಕಾರ್ಯಕ್ರಮ ಮಾಡುತ್ತಿದೆ. ಗಾಂಧೀಜಿ ಹೆಸರಲ್ಲಿ ಕಾರ್ಯಕ್ರಮ ಮಾಡಲು ನನ್ನ ತಕರಾರಿಲ್ಲ. ಸಂಘಟಿತ ಹೋರಾಟದ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಗಾಂಧೀಜಿ. ಅವರ ರಾಮರಾಜ್ಯ ಪರಿಕಲ್ಪನೆ ಇವತ್ತು ರಾಜ್ಯದಲ್ಲಿದ್ಯಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಳ್ಳಿಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಹಣ ಬಿಡುಗಡೆ ಆಗಿಲ್ಲ. ಸರಿಯಾದ ಚಿಕಿತ್ಸೆ ಇಲ್ಲದೇ ಬಾಣಂತಿಯರು, ಮಕ್ಕಳು ಸಾಯುತ್ತಿದ್ದಾರೆ. ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್‌ಗಳಿಲ್ಲ. 2.75 ಲಕ್ಷ ಸರ್ಕಾರಿ ನೌಕರಿ ಖಾಲಿ ಇಟ್ಟುಕೊಂಡಿದ್ದಾರೆ. ಇವುಗಳಿಗೆ ಹಣ ಇಲ್ಲ ಎಂದು ಹೇಳಿ, ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.