ಚೆನ್ನೈ : ನಿನ್ನೆಯಷ್ಟೆ ಕೈ ಬಿಟ್ಟು ಕಮಲ ಹಿಡಿದ ನಟಿ ಖುಷ್ಬೂ (Khushboo) ಇಂದು ಕಾಂಗ್ರೆಸ್ (Congress ) ಪಕ್ಷವನ್ನು ಬುದ್ಧಿಮಾಂದ್ಯ ಪಕ್ಷ ಎಂದಿದ್ದಾರೆ.
ಖುಷ್ಬೂ ಸುಂದರ್ 2014ರಲ್ಲಿ ಡಿಎಂಕೆ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ತದನಂತರ ತಮಿಳುನಾಡಿನ ರಾಜಕೀಯದಲ್ಲಿ ಸಕ್ರಿಯವಾಗಿದ್ದರು. ಪಕ್ಷದ ವಕ್ತಾರೆಯಾಗಿ ಕಾರ್ಯನಿರ್ವಹಿಸಿದ್ದರು.

ಆದ್ರೆ ಭಾನುವಾರ ರಾತ್ರಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಪಕ್ಷದಿಂದ ಹೊರಬಂದರು.
ಸೋಮವಾರ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು.
ಇದನ್ನೂ ಓದಿ : ನಾಳೆ ಬೆಳಗ್ಗೆ 11ಗಂಟೆಗೆ ಮುನಿರತ್ನ ನಾಮಪತ್ರ : ಸೋಮಶೇಖರ್
ದೆಹಲಿಯಿಂದ ಇಂದು ಚೆನ್ನೈಗೆ ಬಂದ ಖುಷ್ಬೂ ಮಾಧ್ಯಮಗಳ ಜೊತೆ ಮಾತನಾಡಿ, ಕಳೆದ ಆರು ವರ್ಷದಿಂದ ನಾನು ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದೇನೆ.
ಪಾರ್ಟಿಗಾಗಿ ನಾನು ಬಹಳ ಶ್ರಮವಹಿಸಿ ಕೆಲಸ ಮಾಡಿದ್ದೇನೆ. ಈಗ ಪಾರ್ಟಿ ತ್ಯಜಿಸಿದ ನಂತರ ನಾನು ಇಷ್ಟು ದಿನ ಬುದ್ಧಿಮಾಂದ್ಯ ಪಕ್ಷದಲ್ಲಿ ಇದ್ದೆ ಎಂದು ನನಗೆ ಆರ್ಥವಾಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಬುದ್ಧಿಮಾಂದ್ಯ ಪಕ್ಷ ಎಂಬ ಖುಷ್ಬೂ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.
ಇದನ್ನೂ ಓದಿ : ಆರ್ ಆರ್ ನಗರ ಬೈ ಎಲೆಕ್ಷನ್ : ವಿ ಕೃಷ್ಣಮೂರ್ತಿ ಜೆಡಿಎಸ್
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








