ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ದೇಶಕ್ಕಾಗಿ ಮಾಡಿರುವ ಅಮೂಲ್ಯ ಕೊಡುಗೆಗಳನ್ನು ಮರೆಯಲು ಕಾಂಗ್ರೆಸ್ ಪಕ್ಷ ಎಡೆಬಿಡದೆ ಪ್ರಯತ್ನಿಸಿದೆ ಎಂಬ ಗಂಭೀರ ಆರೋಪವನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಡಿದ್ದಾರೆ.
‘ಭೀಮ ಹೆಜ್ಜೆ 100ರ ಸಂಭ್ರಮ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಡಾ. ಅಂಬೇಡ್ಕರ್ ಅವರ ತ್ಯಾಗಗಳು ಇಂದು ದೇಶವನ್ನು ಬೆಳಕಿಗೆ ತಂದಿದ್ದರೂ, ಅವರನ್ನು ನಿರಾಕರಿಸುವ ಕೆಲಸ ಕಾಂಗ್ರೆಸ್ ಪಕ್ಷ ಮಾಡಿದೆ, ಎಂದು ತಿಳಿಸಿದರು.
ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಭೆಯಲ್ಲಿ ಭಾಗಿಯಾಗಬಾರದು ಎಂಬ ಉದ್ದೇಶದಿಂದಲೇ ಹಿಂದೂ ಬಾಹುಳ್ಯದ ಕೆಲವು ಕ್ಷೇತ್ರಗಳನ್ನು ಪಾಕಿಸ್ತಾನಕ್ಕೆ ಒಪ್ಪಿಸಲಾಯಿತು. ಅಂಬೇಡ್ಕರ್ ಅವರನ್ನು ರಾಜ್ಯಸಭೆಗೆ ಕಳುಹಿಸದಂತೆ ತಡೆಯುವ ಯೋಜನೆಯೊಂದು ಕಾಂಗ್ರೆಸ್ ನಿಂದ ನಡೆದಿತ್ತು, ಎಂಬ ಆರೋಪ ಮಾಡಿದ್ದಾರೆ.
ಅಲ್ಲದೆ, ಅವರನ್ನು ಎರಡು ಬಾರಿ ಚುನಾವಣೆಗಳಲ್ಲಿ ಸೋಲಿಸಲಾಯಿತು. ಮಧ್ಯಂತರ ಸರ್ಕಾರದಲ್ಲಿ ಅವರಿಗೆ ಸ್ಥಾನ ನೀಡದಂತೆ ಕಾಂಗ್ರೆಸ್ ನಾಯಕರು ನಡೆದುಕೊಂಡರು, ಎಂದು ಅವರು ಕಿಡಿಕಾರಿದರು.
ಬಾಬಾಸಾಹೇಬ ಅಂಬೇಡ್ಕರ್ ಅವರಂತ ಮಹಾನ್ ಚಿಂತಕರಿಗೆ ರಾಜಕೀಯ ಪಕ್ಷಗಳು ಸಲ್ಲಿಸಬೇಕಾದ ಗೌರವ, ಪ್ರಸಕ್ತ ಕಾಲಘಟ್ಟದಲ್ಲಿ ಇಲ್ಲದಿರುವುದು ವಿಷಾದಕರವಾಗಿದೆ ಎಂದು ಹೇಳಿದರು.
ಪ್ರಹ್ಲಾದ್ ಜೋಶಿಯ ಈ ಆರೋಪಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಕಾಂಗ್ರೆಸ್ ಈ ಆರೋಪಗಳಿಗೆ ಪ್ರತಿಕ್ರಿಯೆ ನೀಡಬೇಕಾಗಿದೆ.
![{"remix_data":[],"source_tags":[],"total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false,"used_sources":{"version":1,"sources":[{"id":"435250766003211","type":"ugc"},{"id":"441845485021211","type":"ugc"},{"id":"289170894054211","type":"ugc"}]}}](https://saakshatv.com/wp-content/uploads/2025/04/Picsart_25-04-11_18-47-25-164-750x500.jpg)







