ಕಾಂಗ್ರೆಸ್ ಆಶ್ವಾಸನೆಗಳನ್ನ ಈಡೇರಿಸದೇ ಕೆಟ್ಟ ದಿನಗಳನ್ನ ಎದುರಿಸುತ್ತಿದೆ – ಮಾಯಾವತಿ
ಕಾಂಗ್ರೆಸ್ ಆಶ್ವಾಸನೆಗಳನ್ನ ಈಡೇರಿಸದೇ ಕೆಟ್ಟ ದಿನಗಳನ್ನು ಎದುರಿಸುತ್ತಿದೆ ಎಂದು ಉತ್ತರಪ್ರದೇಶದ ಮಾಜಿ ಸಿಎಂ ಹಾಗೂ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರು ಕಿಡಿಕಾರಿದ್ದಾರೆ. ಹೌದು ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪಿಯು ವಿದ್ಯಾರ್ಥಿನಿಯರಿಗೆ ಸ್ಮಾರ್ಟ್ ಫೋನ್ ಮತ್ತು ಪದವೀಧರ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟಿ ನೀಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಘೋಷಿಸಿದ ಬೆನ್ನಲ್ಲೇ ಈ ಬಗ್ಗೆ ಟೀಕೆ ಮಾಡಿರುವ ಮಾಯಾವತಿ ಕಾಂಗ್ರೆಸ್ ಪಕ್ಷ ಚುನಾವಣೆ ಸಂದರ್ಭದಲ್ಲಿ ಮತಗಳಿಕೆಯನ್ನೇ ಗುರಿಯಾಗಿಸಿಕೊಂಡು ನೀಡಿದ ಆಶ್ವಾಸನೆಗಳನ್ನು ಈಡೇರಿಸದ ಕಾರಣ ಈಗ ಕೆಟ್ಟ ದಿನಗಳನ್ನು ಎದುರಿಸಬೇಕಾಗಿದೆ ಎಂದಿದ್ದಾರೆ.
ಅಲ್ಲದೇ ಭರವಸೆ ಈಡೇರಿಸದ ಕಾಂಗ್ರೆಸ್ ಪಕ್ಷದ ಮೇಲೆ ಏತಕ್ಕಾಗಿ ವಿಶ್ವಾಸವಿಡಬೇಕು ಎಂದು ಪ್ರಶ್ನಿಸಿದ್ದಾರೆ. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಕಾಂಗ್ರೆಸ್ ವಿಫಲವಾಗಿದೆ. ಬಿಜೆಪಿ ಕೂಡ ಅದೇ ದಾರಿಯಲ್ಲಿ ಸಾಗಿದೆ. ಮುಂದೆ ಈ ಪಕ್ಷವೂ ಇಂಥದ್ದೇ ಕೆಟ್ಟದಿನಗಳನ್ನು ಎದುರಿಸಲಿದೆ ಎಂದಿದ್ದಾರೆ. ಅಂದ್ಹಾಗೆ ಉತ್ತರಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಆಡಳಿತ ರೂಢ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಪಕ್ಷ , ಬಿಎಸ್ ಪಿ , ಕಾಂಗ್ರೆಸ್ ಸೇರಿದಂತೆ ಎಲ್ಲಾ ಪಕ್ಷಗಳು ತಯಾರಿ ಮಾಡಿಕೊಳ್ತಿದ್ದು, ಇತರೇ ಪಕ್ಷದವರ ವಿರುದ್ಧ ಮತ್ತೊಬ್ಬರು ವಾಗ್ದಾಳಿ ನಡೆಸೋದು , ಆರೋಪ ಹೊರಿಸುವುದು ಸರ್ವೇ ಸಾಮಾನ್ಯವಾಗಿದೆ.