( Congress ) ಕಾಂಗ್ರೆಸ್ ಗೆ ದೇಶದಲ್ಲಿ ಭವಿಷ್ಯವಿಲ್ಲ : ಶ್ರೀರಾಮುಲು
ಮಸ್ಕಿ : ಕಾಂಗ್ರೆಸ್ ಮುಳುಗುವ ಹಡಗು ಇದ್ದ ಹಾಗೆ, ಕಾಂಗ್ರೆಸ್ ಗೆ ದೇಶದಲ್ಲಿ ಭವಿಷ್ಯವಿಲ್ಲ ಎಂದು ಸಚಿವ ಬಿ. ಶ್ರೀರಾಮಲು ಲೇವಡಿ ಮಾಡಿದ್ದಾರೆ.
ಮಸ್ಕಿ ವಿಧಾನಸಭಾ ಉಪಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಪ್ರತಾಪ ಗೌಡ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ರು.
ಈ ವೇಳೆ ಅವರಿಗೆ ಸಚಿವರು ಸಾಥ್ ನೀಡಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಮುಳುಗುತ್ತಿರುವ ಹಡಗು ಇದ್ದ ಹಾಗೆ, ಆ ಪಕ್ಷಕ್ಕೆ ದೇಶದಲ್ಲಿ ಭವಿಷ್ಯವಿಲ್ಲ. ಈ ಮುಳುಗುವ ಕಾಂಗ್ರೆಸ್ ಹಡುಗಿಗೆ ಕ್ಯಾಪ್ಟನ್ ಡಿಕೆಶಿಯಾಗಿದ್ದಾರೆ.
ಕ್ಷೇತ್ರಗಳ ಅಭಿವೃದ್ಧಿ ವಿಚಾರವನ್ನು ಮುಂದಿಟ್ಟುಕೊಂಡು ಜನರಿಂದ ಮತ ಕೇಳುತ್ತಿದ್ದೇವೆ. ಮೂರು ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಸಂಸದರು ಗುಲಾಮರು ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ರಾಮುಲು, ಉಪಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿ ಮಾತನಾಡುತ್ತಿದ್ದಾರೆ.
ಸಿದ್ದರಾಮಯ್ಯ ಹಿರಿಯರು, ಈ ರೀತಿ ಮಾತನಾಡಬಾರದು ಎಂದು ಹೇಳಿದರು.
