ಕಾಂಗ್ರೆಸ್ 70 ವರ್ಷದಲ್ಲಿ ಕನಿಷ್ಠ ಶೌಚಾಲಯ ಕಟ್ಟಿಸಿಕೊಟ್ಟಿಲ್ಲ : ಕೆ.ಎಸ್.ಈಶ್ವರಪ್ಪ Congress
ದಾವಣಗೆರೆ : ಕಾಂಗ್ರೆಸ್ ಪಕ್ಷ ತನ್ನ 70 ವರ್ಷಗಳ ಆಡಳಿತದಲ್ಲಿ ಕನಿಷ್ಠ ಶೌಚಾಲಯ ಕಟ್ಟಿಸಿಕೊಡಲಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.
ದಾವಣಗೆರೆಯಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷ ತನ್ನ 70 ವರ್ಷಗಳ ಆಡಳಿತದಲ್ಲಿ ಏನು ಮಾಡಿದೆ ಎಂದು ಈಶ್ವರಪ್ಪ ಪ್ರಶ್ನಿಸಿದ್ದಾರೆ.
ಅಲ್ಲದೆ ಕಾಂಗ್ರೆಸ್ ಅವರು ಕನಿಷ್ಠ ಶೌಚಾಲಯ ಕಟ್ಟಿಸಿಕೊಡಲಿಲ್ಲ. ಹೆಣ್ಣು ಮಕ್ಕಳು ಕತ್ತಲಾದ ಮೇಲೆ ಶೌಚಾಲಯಕ್ಕೆ ಹೋಗುವ ಪರಿಸ್ಥಿತಿ ಇತ್ತು.
ಬಯಲು ಶೌಚ ಮುಕ್ತ ಮಾಡಿದ್ದು ಬಿಜೆಪಿ ಸರ್ಕಾರ ಎಂದು ಹೇಳಿದರು.
ಇದೇ ವೇಳೆ ಕೊರೊನಾ ವ್ಯಾಕ್ಸಿನ್ ವಿಚಾರವಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಂಡರೇ ಗಂಡಸ್ತನ ಹೋಗುತ್ತದೆ ಎಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಹೇಳಿದ್ದರು.
ಆದ್ರೆ ಜನರು ಕಾಂಗ್ರೆಸಿಗರ ಮಾತು ಕೇಳದೇ ವ್ಯಾಕ್ಸಿನ್ ಹಾಕಿಸಿಕೊಂಡಿದ್ದಾರೆ ಎಂದರು.