ಬೆಂಗಳೂರು: ರಾಜ್ಯದಲ್ಲಿ ನಡೆದಿದ್ದ ಉಪ ಚುನಾವಣೆಯ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಜಯ ಭೇರಿ ಬಾರಿಸಿದ್ದು, ಎನ್ ಡಿಎ ಮೈತ್ರಿಯ ಬಿಜೆಪಿ ಹಾಗೂ ಜೆಡಿಎಸ್ ಗೆ ಭಾರೀ ಮುಖಭಂಗವಾಗಿದೆ. ಈ ವಿಷಯವಾಗಿ ಮಾತನಾಡಿರುವ ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಕಾಂಗ್ರೆಸ್ ಪಕ್ಷವು ಅಧಿಕಾರ ಹಾಗೂ ಹಣದ ಬಲದಿಂದ ಗೆಲುವು ಸಾಧಿಸಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರದಲ್ಲಿ ಪ್ರಾರಂಭದಲ್ಲಿ ಫೈಟ್ ಇತ್ತು. ಅದರೆ ಈಗಿನ ಟ್ರೆಂಡ್ ಸಮಾಧಾನಕಾರವಾಗಿಲ್ಲ. ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ (Congress) ಗೆಲುವು ಸಾಧಿಸಿದೆ. ಶಿಗ್ಗಾಂವಿಯಲ್ಲಿ ಗೆಲ್ಲುತ್ತೇವೆ ಎಂದುಕೊಂಡಿದ್ದೆವು. ಆದರೆ ಹಿನ್ನಡೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಫಲಿತಾಂಶ ನಮಗೆ ಸಮಾಧಾನ ತಂದಿಲ್ಲ. ಜೆಡಿಎಸ್, ನಮ್ಮ ಕಾರ್ಯಕರ್ತರು ಒಟ್ಟಿಗೆ ಕೆಲಸ ಮಾಡಿದ್ದಾರೆ. ಆಡಳಿತ ಪಕ್ಷ ಕಾಂಗ್ರೆಸ್ ಇದ್ದರಿಂದ ಮೇಲುಗೈ ಸಾಧಿಸಿದ್ದಾರೆ. ಈ ಹಿಂದೆ ನಾವು ಉಪಚುನಾವಣೆಯಲ್ಲಿ ಗೆದ್ದಿದ್ದೆವು. ಶಿಗ್ಗಾಂವಿಯಲ್ಲಿ ಮುಸ್ಲಿಂ ವೋಟ್‌ಗಳು ಕಾಂಗ್ರೆಸ್‌ಗೆ ವರದಾನವಾಗಿವೆ ಎಂದಿದ್ದಾರೆ.








