ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮನೆ ಮೇಲಿ ಇಂದು ಬೆಳ್ಳಂ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ ಪರಿಣಾಮ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಆಕ್ರೋಶ ಭುಗಿಲೆದ್ದಿದೆ.
ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ಬಳ್ಳಾರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ರಾಯಲ್ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ರಸ್ತೆ ತಡೆದು ಆಕ್ರೋಶ ಹೊರಹಾಕಿದ್ದಾರೆ.
ಇನ್ನೂ ಈ ದಾಳಿ ಹಿಂದೆ ರಾಜಕೀಯ ದುದ್ದೇಶವಿದೆ ಎಂದು ಆರೋಪಿಸಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೊಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಡಿಕೆಶಿ ಅವರಿಗೆ ರಾಜ್ಯ ಕಾಂಗ್ರೆಸ್ ನ ಬೆಂಬಲವಿದ್ದು, ಇದಕ್ಕೆ ತಕ್ಕ ಉತ್ತರ ಕೋಡ್ತೇವೆ ಎಂದು ಕಿಡಿಕಾರಿದ್ದಾರೆ.