2 ತಿಂಗಳಲ್ಲಿ ಎರಡನೇ ಬಾರಿ ಕೊರೊನಾ ಸೋಂಕಿಗೆ ತುತ್ತಾದ ಸೋನಿಯಾ ಗಾಂಧಿ
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಅವರಿಗೆ ಮತ್ತೊಮ್ಮೆ ಕೊರೊನಾ ಸೋಂಕು ದೃಢಪಟ್ಟಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಇದನ್ನ ಖಚಿತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಸರ್ಕಾರ ಹೊರಡಿಸಿರುವ ಪ್ರೋಟೋಕಾಲ್ ಪ್ರಕಾರ ಐಸೋಲೇಟ್ ಆಗಿರುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.
ಈ ಹಿಂದೆ ಜೂನ್ 2 ರಂದು ಸೋನಿಯಾ ಗಾಂಧಿಗೆ ಆವರಿಗೆ ಕೊರೊನಾ ಸೋಂಕು ತಗುಲಿತು. ಆಗ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದ ಕಾರಣ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ, ಪ್ರಿಯಾಂಕಾ ಗಾಂಧಿ ಕೂಡ ಕೊರೊನಾ ಸೋಂಕಿಗೆ ಒಳಗಾಗಿದ್ದರು ಸದ್ಯ ಅವರೂ ಐಸೋಲೇಶನ್ನಲ್ಲಿದ್ದಾರೆ. ಇದಕ್ಕೂ ಮೊದಲು ಪ್ರಿಯಾಂಕಾ ಗಾಂಧಿಗೆ ಜೂನ್ 3 ರಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ನಿನ್ನೆಯಷ್ಟೇ ತೇಜಸ್ವಿ ಯಾದವ್ ಭೇಟಿ
ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಒಂದು ದಿನದ ಹಿಂದೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ಬಿಹಾರದಲ್ಲಿ ಸಚಿವ ಸಂಪುಟ ವಿಸ್ತರಣೆಗೂ ಮುನ್ನ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿದ್ದರು. ಈ ವೇಳೆ ಸೀತಾರಾಂ ಯೆಚೂರಿ ಅವರನ್ನೂ ಭೇಟಿಯಾದರು. ಇದಾದ ಒಂದು ದಿನದ ನಂತರ ಸೋನಿಯಾ ಗಾಂಧಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ.