ಕಲಬುರಗಿ : ಕಾಂಗ್ರೆಸ್ ನಾಯಕರಿಗೆ ಪಕ್ಷದ ಅಧ್ಯಕ್ಷರನ್ನು ನೇಮಕ ಮಾಡಲು ಆಗುತ್ತಿಲ್ಲ. ಈ ಮೂಲಕ ಕಾಂಗ್ರೆಸ್ ಈಗ ವೃದ್ಧಾಶ್ರಮವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯ ಹಗರಣಗಳನ್ನು ಬಯಲಿಗೆಳೆಯುತ್ತೇವೆ. ಕಾಂಗ್ರೆಸ್ ಅಧಿಕಾರದಲ್ಲಿ ಇಲ್ಲದೆ ಇದ್ದಾಗ ಗೊಂದಲ ಸೃಷ್ಟಿಸುತ್ತದೆ. ಕಾಂಗ್ರೆಸ್ ನಾಯಕರು ಗೊಂದಲ ಸೃಷ್ಟಿಸಿ ಬೆಂಕೆ ಹಚ್ಚಿ ಸುಖ ಅನುಭವಿಸುತ್ತಿದ್ದಾರೆ. ಡಿಜೆ ಹಳ್ಳಿ ಗಲಭೆ ಕಾಂಗ್ರೆಸ್ ನ ಆಂತರಿಕ ಗೊಂದಲದಿಂದ ಆಗಿದ್ದು ಎಂದು ಕಟೀಲ್ ದೂರಿದರು.
ಇದೇ ವೇಳೆ ಟಿಪ್ಪು ಈ ಮಣ್ಣಿನ ಮಗ ಎಂಬ ವಿಶ್ವನಾಥ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಕಟೀಲ್, ಅದು ಅವರ ವೈಯಕ್ತಿಕ ವಿಚಾರ. ಬಿಜೆಪಿ ಟಿಪ್ಪು ವಿರುದ್ಧ ಹೋರಾಡುತ್ತ ಬಂದಿದೆ. ಟಿಪ್ಪು ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ವಿಶ್ವನಾಥ್ ಹೇಳಿಕೆ ಬಗ್ಗೆ ವಿವರಣೆ ಪಡೆಯುತ್ತೇನೆ ಎಂದರು.