ಕಾಂಗ್ರೆಸ್ ಹಣದ ಮೂಲಕ ಚುನಾವಣೆ ಗೆಲ್ಲಲು ಹೊರಟಿದೆ : ಬೊಮ್ಮಾಯಿ Congress saaksha tv
ಬೆಂಗಳೂರು : ಕಾಂಗ್ರೆಸ್ ಹಣದ ಮೂಲಕ ಚುನಾವಣೆಯನ್ನು ಗೆಲ್ಲಲು ಹೊರಟಿದೆ. ಅದರ ನೈತಿಕತೆ ಕೆಳಮಟ್ಟಕ್ಕೆ ಕುಸಿದಿದೆ. ಪಕ್ಷಕ್ಕೆ ಸೋಲಾಗುವುದು ಖಚಿತವೆಂದು ಸ್ಪಷ್ಟವಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಣದ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿದೆ. ಆದರೆ, ಮತದಾರರು ಇದಕ್ಕೆ ಮಣೆ ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾತಿ ಹೇಳಿದ್ದಾರೆ.
ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಆನೇಕಲ್ ನಲ್ಲಿಂದು ಬಿಜೆಪಿ ಆಯೋಜಿಸಿದ್ದ ವಿಜಯ ಸಂಕಲ್ಪ ಜನಪ್ರತಿನಿಧಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಸಿಎಂ ಬೊಮ್ಮಾಯಿ, ಬೆಂಗಳೂರು ನಗರ ಸುತ್ತಮುತ್ತ ಆಗಿರುವ ಔದ್ಯೋಗಿಕರಣದಿಂದ ಬರುವ ಸಂಪೂರ್ಣ ತೆರಿಗೆಯನ್ನು ಗ್ರಾಮ ಪಂಚಾಯ್ತಿಗಳಿಗೆ ನೀಡುವ ಮೂಲಕ ಅವುಗಳನ್ನು ಸಬಲೀಕರಣಗೊಳಿಸಲಾಗುವುದು. ಆ ಹಣದ ಮೂಲಕ ಇನ್ನಷ್ಟು ಮೂಲಸೌಕರ್ಯವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಸರ್ಕಾರ ಗ್ರಾಮಗಳ ಅಭಿವೃದ್ಧಿಯ ಪರವಾಗಿದೆ ಎಂದರು.
ಇನ್ನು ಸಮಾವೇಶದಲ್ಲಿ ಸಚಿವರಾದ ಕೇಂದ್ರ ಸಚಿವ ನಾರಾಯಣಸ್ವಾಮಿ, ಸಚಿವರಾದ ಆರ್. ಅಶೋಕ, ಬೈರತಿ ಬಸವರಾಜ, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಭಾಗವಹಿಸಿದ್ದರು.









