ಕಾಂಗ್ರೆಸ್ ಬಿಜೆಪಿಯ ಕೈಕಾಲು ಹಿಡಿದು ಚುನಾವಣೆಯಲ್ಲಿ ಸ್ಪರ್ಧಿಸ್ತಿದೆ : ಈಶ್ವರಪ್ಪ
ಶಿವಮೊಗ್ಗ : ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಗೆ ಅಭ್ಯರ್ಥಿಗಳೇ ಇಲ್ಲ.
ಹೀಗಾಗಿ ಕಾಂಗ್ರೆಸ್ ನವರು ಬಿಜೆಪಿಯವರ ಕೈ ಕಾಲು ಹಿಡಿದು ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಪರಿಷತ್ ಚುನಾವಣೆ ವಿಚಾರವಾಗಿ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗೆ ಇನ್ನೂ ಅಭ್ಯರ್ಥಿಗಳೇ ಸಿಕ್ಕಿಲ್ಲ. ಅವರಿನ್ನೂ ಅಭ್ಯರ್ಥಿಗಳ ಹುಡುಕಾಟದಲ್ಲಿದ್ದಾರೆ.
ತಮಗೆ ಅಭ್ಯರ್ಥಿಗಳು ಇಲ್ಲ ಎಂದು ಬಿಜೆಪಿಯವರ ಕೈಕಾಲು ಹಿಡಿದು ಚುನಾವಣೆಯಲ್ಲಿ ನಿಲ್ಲಿಸಿಕೊಂಡಿದ್ದಾರೆ ಎಂದು ಈಶ್ವರಪ್ಪ ಕುಟುಕಿದರು.
ಆದ್ರೆ ನಾವು ಈಗಾಗಲೇ ನಾಲ್ಕು ತಂಡ ಮಾಡಿಕೊಂಡು ರಾಜ್ಯದಲ್ಲಿ ಚುನಾವಣೆ ಪ್ರಚಾರ ಮಾಡುತ್ತಿದೆ.
ಲೋಕಸಭೆ, ವಿಧಾನಸಭೆ, ಕಾರ್ಪೋರೇಷನ್ ಗೆದ್ದ ರೀತಿಯಲ್ಲಿಯೇ 25 ಕ್ಷೇತ್ರದಲ್ಲಿ ಕನಿಷ್ಠ 15-16 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.