ದೇಶದಲ್ಲಿ ಕಾಂಗ್ರೆಸ್ ಹೋಳಾಗುತ್ತಿದೆ : ಬೊಮ್ಮಾಯಿ Congress saaksha tv
ಹುಬ್ಬಳ್ಳಿ : ಸಿಂದಗಿ – ಹಾನಗಲ್ ಉಪಚುನಾವಣೆಯ ಫಲಿತಾಂಶ ಕಾಂಗ್ರೆಸ್ – ಬಿಜೆಪಿ ನಾಯಕರ ವಾಗ್ಯುದ್ಧಕ್ಕೆ ಕಾರಣವಾಗಿದೆ.
ಅದರಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಧ್ಯೆ ಮಾತಿನ ಕಾಳಗ ಆರಂಭವಾಗಿದ್ದು, ಒಬ್ಬರಿಗೊಬ್ಬರು ವಾಗ್ಬಾಣಗಳನ್ನು ಬಿಡುತ್ತಿದ್ದಾರೆ.
ಮುಂದಿನ ದಿನಗಳಲ್ಲಿ ಬಿಜೆಪಿಯ ಹಲವು ನಾಯಕರು ಕಾಂಗ್ರೆಸ್ ಗೆ ಬರಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದು, ಇದಕ್ಕೆ ಹುಬ್ಬಳ್ಳಿಯಲ್ಲಿ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ದೇಶದಲ್ಲಿ ಕಾಂಗ್ರೆಸ್ ಒಡೆದು ಹೋಳಾಗುತ್ತಿದೆ.
ಈ ಕುರಿತು ಡಿ.ಕೆ. ಶಿವಕುಮಾರ್ ಗಮನ ಹರಿಸಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದರು.
ಸಿಂದಗಿಯಲ್ಲಿ ಬಿಜೆಪಿ ದೊಡ್ಡ ಮಟ್ಟದ ಗೆಲುವು ಸಾಧಿಸಿದೆ. ಆದ್ರೆ ದೇಶದಲ್ಲಿ ಕಾಂಗ್ರೆಸ್ ಹೋಳಾಗುತ್ತಿದೆ.
ಈ ಬಗ್ಗೆ ಡಿಕೆಶಿ ಗಮನಹರಿಸಲಿ ಎಂದು ಬಸವರಾಜ ಬೊಮ್ಮಾಯಿ ಕುಟುಕಿದ್ದಾರೆ.









