ದೇವನಹಳ್ಳಿಯಲ್ಲಿ ಕಾಂಗ್ರೆಸ್ ರಣಕಹಳೆ : ಪಾದಯಾತ್ರೆಗೆ ಸಿದ್ದರಾಮಯ್ಯ ಚಾಲನೆ Congress
ಬೆಂಗಳೂರು : ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಇಂದು ರಣಕಹಳೆ ಮೊಳಗಿಸಲಿದೆ.
ಪೆಟ್ರೋಲ್, ಡಿಸೇಲ್ ಗ್ಯಾಸ್ ಬೆಲೆ ಏರಿಕೆ ಖಂಡಿಸಿ ದೇವನಹಳ್ಳಿಯಲ್ಲಿ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಬೃಹತ್ ಪಾದಯಾತ್ರೆ ನಡೆಸಲಿದೆ.
ಈ ಹಿನ್ನೆಲೆ ಕಾಂಗ್ರೆಸ್ ನಾಯಕರು ಈಗಾಗಲೇ ದೇವನಹಳ್ಳಿಯತ್ತ ಮುಖ ಮಾಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಇದಲ್ಲದೆ 2018ರಲ್ಲಿ ಪರಾಭವಗೊಂಡ ಕ್ಷೇತ್ರಗಳಲ್ಲಿ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.
ಇನ್ನು ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಹೆಚ್.ಕೆ. ಪಾಟೀಲ್, ಜಿ. ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ,
ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ, ಎಸ್.ಆರ್. ಪಾಟೀಲ್, ರಮೇಶ್ ಕುಮಾರ್, ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.