ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಕೇವಲ ಎರಡು ಚರಣಗಳನ್ನು ಮಾತ್ರ ಹಾಡುವ ನಿರ್ಧಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್‌ನ ಈ ನಿರ್ಧಾರವನ್ನು ದೇಶ ವಿರೋಧಿ ಎಂದು ಟೀಕಿಸಿರುವ ಅಮಿತ್ ಶಾ, 1937ರಲ್ಲಿ ಕಾಂಗ್ರೆಸ್ ಪಕ್ಷವು ಮುಸ್ಲಿಂ ಓಲೈಕೆಗಾಗಿ ‘ವಂದೇ ಮಾತರಂ’ ಅನ್ನು ಎರಡು ಭಾಗಗಳಾಗಿ ವಿಭಜಿಸುವ ನಿರ್ಧಾರ ಕೈಗೊಂಡಿತ್ತು ಎಂದು ಆರೋಪಿಸಿದ್ದಾರೆ.
1937ರಲ್ಲಿ ಕಾಂಗ್ರೆಸ್ ಪಕ್ಷವು ‘ವಂದೇ ಮಾತರಂ’ ಗೀತೆಯನ್ನು ಎರಡು ಭಾಗಗಳಾಗಿ ವಿಭಜಿಸುವ ಮೂಲಕ ದೇಶದ ವಿಭಜನೆಗೆ ಅಡಿಪಾಯ ಹಾಕಿತು ಎಂಬುದನ್ನು ನಾನು ದೇಶಕ್ಕೆ ನೆನಪಿಸಲು ಬಯಸುತ್ತೇನೆ ಎಂದು ಶಾ ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪಕ್ಷದ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವುದಾಗಿ ಹೇಳಿದ ಬೆನ್ನಲ್ಲೇ ಅಮಿತ್ ಶಾ ಅವರ ಈ ಹೇಳಿಕೆ ಬಂದಿದೆ.
ಈ ವಿಚಾರ ಇದೀಗ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದ್ದು, ‘ವಂದೇ ಮಾತರಂ’ ಹಾಡಿನ ಇತಿಹಾಸ, ಅದರ ಗಾಯನ ಪದ್ಧತಿ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಅದರ ಪಾತ್ರದ ಕುರಿತು ಮತ್ತೊಮ್ಮೆ ಚರ್ಚೆ ಆರಂಭವಾಗಿದೆ.








