ಉಸಿರು ನಿಂತರೂ, ಬೆಳಗೆರೆ ಅಕ್ಷರಗಳು ಎಂದಿಗೂ ಅಜರಾಮರ
ಬೆಂಗಳೂರು : ಹಿರಿಯ ಪತ್ರಕರ್ತ, ಬರಹಗಾರ ರವಿ ಬೆಳಗೆರೆ ನಿಧನಕ್ಕೆ ರಾಜ್ಯ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ. ಅಕ್ಷರ ಗಾರುಡಿಗ, ಹಿರಿಯ ಪತ್ರಕರ್ತ, ಕಾದಂಬರಿಕಾರ, ‘ಹಾಯ್ ಬೆಂಗಳೂರು’ ಸಂಪಾದಕ, ಅತ್ಯುತ್ತಮ ವಾಗ್ಮಿ ರವಿ ಬೆಳಗೆರೆ ಅವರ ನಿಧನ ಕನ್ನಡ ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ.
ಕನ್ನಡ ಸಾಹಿತ್ಯ ಲೋಕದಲ್ಲಿ ಸ್ಟಾರ್ ಬರಹಗಾರರಾಗಿ ಗುರುತಿಸಿಕೊಂಡಿದ್ದ ಬೆಳೆಗೆರೆ ಅವರ ಉಸಿರು ನಿಂತರು, ಅವರ ಅಕ್ಷರಗಳು ಎಂದಿಗೂ ಅಜರಾಮರ. ಅವರಿಗೆ ನನ್ನ ಅಂತಿಮ ನಮನಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಂಬನಿ ಮಿಡಿದಿದ್ದಾರೆ.
ಎಂ.ಬಿ.ಪಾಟೀಲ್ ಟ್ವೀಟ್ ಮಾಡಿ, ಜನಪ್ರಿಯ ಪತ್ರಕರ್ತರಾದ ಶ್ರೀ ರವಿ ಬೆಳಗೆರೆ ಅವರ ನಿಧನದ ಸುದ್ದಿ ಕೇಳಿ ಅತೀವ ನೋವುಂಟಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.
ತಮ್ಮ ಬರವಣಿಗೆಯಿಂದಲೇ ಅಸಂಖ್ಯ ಅಭಿಮಾನಿಗಳನ್ನು ಸಂಪಾದಿಸಿದ್ದ ಅವರು, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಮಾಡಿದಂತಹ ಸಾಧನೆ ಸ್ತುತ್ಯಾರ್ಹ. ಭಗವಂತನು ಅವರ ಕುಟುಂಬಸ್ಥರು, ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
‘ಅಕ್ಷರ ಮಾಂತ್ರಿಕ’ ರವಿ ಬೆಳಗೆರೆ ಅವರು ಬರೆದಿರುವ ಕೃತಿಗಳು..!
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್ ಮಾಡಿ, ಹಿರಿಯ ಪತ್ರಕರ್ತ, ಲೇಖಕ, ಹಾಯ್ ಬೆಂಗಳೂರ್ ಸಂಸ್ಥಾಪಕ ಸಂಪಾದಕ ರವಿ ಬೆಳಗೆರೆ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಂಬನಿ ಮಿಡಿದಿದ್ದಾರೆ.
ರವಿ ಬೆಳಗೆರೆ ಅವರ ಅಗಲಿಕೆ ಕನ್ನಡ ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಲಭಿಸಲಿ,ಅವರ ಕುಟುಂಬ,ಅಪಾರ ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿ ದೊರಕಲೆಂದು ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಸಲೀಂ ಅಹ್ಮದ್ ಟ್ವಿಟ್ಟರ್ ನಲ್ಲಿ ಹಾಯ್ ಬೆಂಗಳೂರ್ ಪತ್ರಿಕೆಯ ಸಂಸ್ಥಾಪಕರು ಹಾಗೂ ಸಂಪಾದಕರಾಗಿದ್ದ ಹಿರಿಯ ಪತ್ರಕರ್ತ ರವಿ ಬೆಳಗೆರೆಯವರ ನಿಧನ ನೋವು ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಏನು ಹೇಳುವುದಕ್ಕೂ ತೋಚುತ್ತಿಲ್ಲ ; ರವಿ, ಇರಬೇಕಿತ್ತು ಇನ್ನಷ್ಟು ಕಾಲ
ಬರವಣಿಗೆಯ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದ ಅವರು ಪತ್ರಿಕೋದ್ಯಮಕ್ಕೆ ಹೊಸ ರಂಗು ತಂದಿದ್ದರು. ಅವರ ಅಗಲುವಿಕೆ ಕನ್ನಡ ಮಾಧ್ಯಮ ಲೋಕಕ್ಕೆ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ, ಅಭಿಮಾನಿ ಬಳಗಕ್ಕೆ ದೇವರು ದುಃಖ ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel