ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಗುಲಾಂ ನಬಿ ಆಜಾದ್ ಸಹೋದರನ ಮಗ…
ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರ ಸಹೋದರನ ಮಗ ಮುಬಾಶಿರ್ ಆಜಾದ್ ಬಿಜೆಪಿಗೆ ಸೇರ್ಪಡಯಾಗಿದ್ದಾರೆ. “ಪ್ರಧಾನಿ ನರೇಂದ್ರ ಮೋದಿಯವರ ತಳಮಟ್ಟದ ಅಭಿವೃದ್ಧಿ ಕಾರ್ಯಗಳಿಂದ ಪ್ರಭಾವಿತನಾಗಿದ್ದೇನೆ ಎಂದು ಹೇಳಿದ್ದಾರೆ.
ಗುಲಾಂ ನಬಿ ಆಜಾದ್ ಅವರ ಕಿರಿಯ ಸಹೋದರ ಲಿಯಾಕತ್ ಅಲಿ ಅವರ ಪುತ್ರ ಮುಬಾಶಿರ್ ಆಜಾದ್ ಕೂಡ ತಮ್ಮ ಚಿಕ್ಕಪ್ಪನಿಗೆ ಕಾಂಗ್ರೆಸ್ ನಾಯಕತ್ವದಿಂದ “ಅಗೌರವ” ಉಂಟಾಗಿದೆ ಅದು ನೋವುಂಟುಮಾಡಿತು ಹಳೆಯ ಪಕ್ಷದಿಂದ ಬೇರ್ಪಡಲು ಕಾರಣವಾಯಿತು ಎಂದು ಹೇಳಿದ್ದಾರೆ. ಆದರೆ, ಬಿಜೆಪಿ ಸೇರುವ ಬಗ್ಗೆ ಚಿಕ್ಕಪ್ಪನ ಜತೆ ಚರ್ಚಿಸಿಲ್ಲ ಎಂದಿದ್ದಾರೆ.
ಮುಬಾಶಿರ್ ಆಜಾದ್ ಮತ್ತು ಅವರ ಬೆಂಬಲಿಗರನ್ನು ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ ಮತ್ತು ಮಾಜಿ ಶಾಸಕ ದಲೀಪ್ ಸಿಂಗ್ ಪರಿಹಾರ್ ಸೇರಿದಂತೆ ಇತರ ಹಿರಿಯ ನಾಯಕರು ಪಕ್ಷಕ್ಕೆ ಸ್ವಾಗತಿಸಿದರು.
ಮುಬಾಶಿರ್ ಬಿಜೆಪಿ ಪಕ್ಷಕ್ಕೆ ಸೇರುವುದನ್ನ ಪ್ರಮುಖ “ತಿರುವು” ಎಂದು ಬಣ್ಣಿಸಲಾಗಿದೆ, ಇದು ಚೆನಾಬ್ ಕಣಿವೆ ಪ್ರದೇಶದ ದೋಡಾ, ಕಿಶ್ತ್ವಾರ್ ಮತ್ತು ರಾಂಬನ್ ಜಿಲ್ಲೆಗಳಿಂದ ಹೆಚ್ಚಿನ ಯುವ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಲು ದಾರಿ ಮಾಡಿಕೊಡುತ್ತದೆ.ಎಂದು ರವೀಂದರ್ ರೈನಾ ಹೇಳಿದ್ದಾರೆ.
ವಿರೋಧ ಪಕ್ಷಗಳ ರಾಜಕೀಯ ನಾಯಕರು, ಹಿಂದೂಗಳು, ಮುಸ್ಲಿಮರು, ಗುಜ್ಜರ್ಗಳು, ಬಕರ್ವಾಲ್ಗಳು ಮತ್ತು ಪಹಾರಿಗಳು ಸೇರಿದಂತೆ ಎಲ್ಲಾ ಸಮುದಾಯಗಳ ಸಾಮಾಜಿಕ ಕಾರ್ಯಕರ್ತರು ಸೇರ್ಪಡೆಗೊಳ್ಳುವುದರೊಂದಿಗೆ ಬಿಜೆಪಿ ವೇಗವಾಗಿ ಬೆಳೆಯುತ್ತಿದೆ ಎಂದು ಬಿಜೆಪಿ ವಕ್ತಾರ ಹೇಳಿದ್ದಾರೆ.