ಬಿಜೆಪಿ ಸೇರಿಕೊಂಡ ರಾಹುಲ್ ಗಾಂಧಿ ಆಪ್ತ ಜಿತಿನ್ ಪ್ರಸಾದ್
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಜಿತೇಂದ್ರ ಪ್ರಸಾದ್ ಅವರ ಪುತ್ರ ಜಿತಿನ್ ಪ್ರಸಾದ್ ಇಂದು ಬಿಜೆಪಿ ಪಾಳಯ ಸೇರಿಕೊಂಡಿದ್ದಾರೆ.
ಮುಂದಿನ ವರ್ಷ ಆರಂಭದಲ್ಲಿ ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಜಿತಿನ್ ಪ್ರಸಾದ್ ಸೇರ್ಪಡೆ ಕೇಸರಿ
ಪಕ್ಷಕ್ಕೆ ಸೇರ್ಪಡೆಗೊಂಡಿರುವುದು ಕಾಂಗ್ರೆಸ್ ಗೆ ಹಿನ್ನಡೆಯಾಗಿದೆ.
ಬಿಜೆಪಿ ಸೇರಿಕೊಂಡ ಬಳಿಕ ಮಾತನಾಡಿದ ಜಿತಿನ್ ಪ್ರಸಾದ್, ಇಂದು ಯಾವುದಾದರೂ ರಾಷ್ಟ್ರೀಯ ಪಕ್ಷ ದೇಶದಲ್ಲಿದ್ದರೆ ಅದು ಬಿಜೆಪಿ ಮಾತ್ರ, ಉಳಿದ ಪಕ್ಷಗಳೆಲ್ಲಾ ಕೆಲವು ಜನರಿಗೆ ಅಥವಾ ಪ್ರದೇಶಕ್ಕೆ ಸೀಮಿತವಾಗಿವೆ.
ಇಷ್ಟು ವರ್ಷಗಳ ಕಾಲ ನನಗೆ ರಾಜಕೀಯದಲ್ಲಿ ಕೆಲಸ ಮಾಡಿ, ನಾಯಕನಾಗಿ ಬೆಳೆಯಲು ಸಹಕರಿಸಿದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದಗಳು. ಇನ್ನು ಮುಂದೆ ನಾನು ನಿಷ್ಠಾವಂತ ಬಿಜೆಪಿ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದರು.