ಭೋಪಾಲ್: ಮಧ್ಯ ಪ್ರದೇಶದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳಿಗೆ ಕಾಂಗ್ರೆಸ್ ನಾಯಕ ಜೋತಿರಾಧಿತ್ಯ ಸಿಂಧಿಯಾ ಅವರು ಬಿಜೆಪಿಗೆ ಸೇರುವ ಮೂಲಕ ತೆರೆ ಬೀಳಲಿದೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ಕಾಂಗ್ರೆಸ್ ಮುಖಂಡ ಜೋತಿರಾದಿತ್ಯ ಸಿಂಧಿಯಾ ಇಂದು ಕಾಂಗ್ರೆಸ್ ಗೆ ಬೈ ಬೈ ಹೇಳುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಜೋತಿರಾಧಿತ್ಯ ಸಿಂಧಿಯಾ ಈ ನಿರ್ಣಯ ಕೈಗೊಂಡಿದ್ದಾರೆ ಎನ್ನಲಾಗಿದೆ. ವಡೋದರಾದ ರಾಜ ಮನೆತನದ ಮಧ್ಯಸ್ಥಿಕೆಯಲ್ಲಿ ಈ ಭೇಟಿ ನಡೆದಿದೆ ಎಂದು ತಿಳಿದುಬಂದಿದೆ.
ಇನ್ನು ಬಿಜೆಪಿಗೆ ಸೇರುವ ಜೋತಿರಾಧಿತ್ಯ ಸಿಂಧಿಯಾ ಅವರಿಗೆ ಕೇಂದ್ರ ರಾಜಕಾರಣದಲ್ಲಿ ಮಹತ್ವದ ಜವಾಬ್ದಾರಿ ನೀಡಲಾಗುವುದು ಎನ್ನಲಾಗುತ್ತಿದೆ.
ಪಶ್ಚಿಮ ಬಂಗಾಳ ಚುನಾವಣಾ ರಣರಂಗದಲ್ಲಿ ದೀದಿ ಆರ್ಭಟ : ಬಿಜೆಪಿ ವಿರುದ್ಧ ಸಿಡಿದೆದ್ದ ಮಮತಾ ಬ್ಯಾನರ್ಜಿಯಿಂದ ಟಿಎಂಸಿ ಪ್ರಣಾಳಿಕೆ ಬಿಡುಗಡೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ರಣಕಹಳೆ ಜೋರಾಗಿ ಮೊಳಗಿದೆ. ಅಧಿಕಾರದ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷಗಳು ತುದಿಗಾಲಿನಲ್ಲಿ ನಿಂತಿರುವ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ ಅಧಿನಾಯಕಿ ಹಾಗೂ ಮುಖ್ಯಮಂತ್ರಿ...








